Mysore
23
overcast clouds

Social Media

ಶನಿವಾರ, 30 ಮೇ 2026
Light
Dark

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ: 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

rain

ಬೆಂಗಳೂರು: ಕರ್ನಾಟಕದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತೀ ಹೆಚ್ಚು ಮಳೆಯಾಗಲಿದೆ.

ಇನ್ನು ಕೊಡಗು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೀದರ್‌, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಡಿಕೇರಿ, ಪೊನ್ನಂಪೇಟೆ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Tags:
error: Content is protected !!