rain
ಬೆಂಗಳೂರು: ಕರ್ನಾಟಕದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತೀ ಹೆಚ್ಚು ಮಳೆಯಾಗಲಿದೆ.
ಇನ್ನು ಕೊಡಗು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೀದರ್, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಡಿಕೇರಿ, ಪೊನ್ನಂಪೇಟೆ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…