ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಇತರ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಮಂಡ್ಯ, ತುಮಕೂರು, ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.
ಇದನ್ನೂ ಓದಿ:- (Rohit Vemula) ರೋಹಿತ್ ವೆಮುಲಾ ಕಾಯ್ದೆ | ಪರಿಶೀಲಿಸಿ ಕ್ರಮ ; ಸಿಎಂ (CM)
ಐದು ದಿನಗಳ ಕಾಲ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದೆ.
ಇನ್ನು ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಉತ್ತಮವಾಗಿರುವ ಪರಿಣಾಮ ರೈತಾಪಿ ವರ್ಗ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಮತ್ತೊಮ್ಮೆ ಮಳೆ ಬೀಳಲಿ ಎಂದು ಕಾಯುತ್ತಿರುವ ಅನ್ನದಾತರು ಬಿತ್ತನೆ ಬೀಜ ಕಾರ್ಯ ಮಾಡಲು ತಯಾರಾಗಿದ್ದಾರೆ.





