ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ ಜೋರಾಗಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ 18 ಜಿಲ್ಲೆಗಳಲ್ಲಿ ಇಂದಿನಿಂದಲೇ ಮತ್ತೆ ಮಳೆ ಶುರುವಾಗಲಿದೆ ಎಂದು ಮಾಹಿತಿ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಗದಗ, ಹಾವೇರಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಏಪ್ರಿಲ್ 21ರವರೆಗೂ ಧಾರಾಕಾರ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೈತರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದೆ.





