wing commander case karnataka
ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದಾನೆ. ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆಗೆ ಒಳಗಾದ ವ್ಯಕ್ತಿ ದೂರು ನೀಡಿದ್ದಾರೆ. ಅದರ ಆಧಾರದ ಮೇಲೆ ವಿಂಗ್ ಕಮಾಂಡ್ ಶೀಲಾದಿತ್ಯ ಬೋಸ್ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. ಆರೋಪಿ ತಲೆ ಮರೆಸಿಕೊಂಡಿರುವುದರಿಂದ ಬಂಧಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇದನ್ನೂ ಓದಿ:- ಕನ್ನಡಿಗರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಹೊಸ ಕಾನೂನು ರೂಪಿಸಿ: ಸರ್ಕಾರಕ್ಕೆ ಜೆಡಿಎಸ್ ಆಗ್ರಹ
ಇನ್ನು ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದಲ್ಲಿ ಪತ್ನಿ ಪಲ್ಲವಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಲಾಗಿದೆ. ಕೊಲೆ ನಾನೇ ಮಾಡಿದ್ದು ಎಂದು ಓಂಪ್ರಕಾಶ್‍ರವರ ಪತ್ನಿ ಒಪ್ಪಿಕೊಂಡಿದ್ದಾರೆ. ಕೊಲೆಯ ಉದ್ದೇಶ ಸೇರಿದಂತೆ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿಗೆ ವಹಿಸಲಾಗಿದೆ. ಓಂಪ್ರಕಾಶ್‍ರವರು ಹಿರಿಯ ಅಧಿಕಾರಿಯಾಗಿದ್ದರು. ಇದೊಂದು ಸೂಕ್ಷ್ಮ ಪ್ರಕರಣ. ಪೊಲೀಸರು ಎಲ್ಲಾ ದೃಷ್ಟಿಕೋನಗಳಿಂದಲೂ ತನಿಖೆ ನಡೆಸುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ:- ಓದುಗರ ಪತ್ರ: ಓಂ ಪ್ರಕಾಶ್ ಹತ್ಯೆ ಹಿಂದಿನ ನಿಜ ಕಾರಣ ಬಯಲಾಗಬೇಕು
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…