ರಾಜ್ಯ

ಕರ್ನಾಟಕದಲ್ಲಿ ಮೊಟ್ಟಮೊದಲ ಜಿಲ್ಲಾ ಅಧಿಕಾರಿ ಅಪ್‌ಸ್ಕಿಲ್ಲಿಂಗ್ ಯೋಜನೆ

ಇನ್ಫೋಸಿಸ್ ಪಾಲುದಾರಿಕೆಯೊಂದಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಸಚಿವ ಡಾ. ಶರಣ್‌ ಪ್ರಕಾಶ್‌ ಚಾಲನೆ*

ಬೆಂಗಳೂರು : ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಇಲಾಖೆಯು ಎಲ್ಲಾ ಪ್ರಮುಖ ಅಧಿಕಾರಿಗಳಿಗೆ, ಮುಖ್ಯಸ್ಥರಿಗೆ, ಜಿಲ್ಲಾ ಅಧಿಕಾರಿಗಳಿಗೆ ಸಮಗ್ರ ಸಾಮರ್ಥ್ಯ ವೃದ್ಧಿ (ಅಪ್‌ ಸ್ಕಿಲ್ಲಿಂಗ್‌) ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ತಳಮಟ್ಟದಿಂದ ಅನುಷ್ಠಾನಕ್ಕೆ ತರಲು ಈ ತರಬೇತಿ ಕಾರ್ಯಕ್ರಮವು ಪರಿಣಾಮಕಾರಿಯಾಗಲಿದೆ.

ಇನ್ಫೋಸಿಸ್ ಸಂಸ್ಥೆಯೊಂದಿಗೆ ಈ ಸಂಬಂಧ ಪಾಲುದಾರಿಕೆ ಮಾಡಿಕೊಳ್ಳಲಾಗಿದೆ. ಇನ್ಫೋಸಿಸ್‌ನ ಮೈಸೂರು ಕ್ಯಾಂಪಸ್‌ನಲ್ಲಿ ಪ್ರಾರಂಭವಾದ ಎರಡು ದಿನಗಳ ಕಾರ್ಯಾಗಾರವು ರಾಜ್ಯದಲ್ಲೇ ಮೊದಲನೆಯದ್ದಾಗಿದೆ.

ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಗುರುವಾರ ವಿಕಾಸಸೌಧದಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಾಗಾರವು ಜಿಲ್ಲಾಮಟ್ಟದ ಅಧಿಕಾರಿಗಳ ನಾಯಕತ್ವ, ಕೌಶಲ್ಯ ವ್ಯವಸ್ಥೆ, ಸಮರ್ಥ ಆಡಳಿತ ಮತ್ತು ಯೋಜನೆ ಅನುಷ್ಠಾನಕ್ಕೆ ಬೇಕಾಗಿರುವ ಎಲ್ಲ ಸಾಂಸ್ಥಿಕ ಸಾಮರ್ಥ್ಯಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ನಾವು ಕಲಿಕೆ ಮತ್ತು ಸಮಸ್ಯೆ ಪರಿಹಾರಕ್ಕಾಗಿ ಸಹಯೋಗದ ವಾತಾವರಣವನ್ನು ಸೃಷ್ಟಿಸುತ್ತಿದ್ದೇವೆ. ಅದು ತಳಮಟ್ಟದಿಂದ ಸುಧಾರಣೆಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸವಿದೆ ಎಂದು ಸಚಿವ ಡಾ. ಪಾಟೀಲ್‌ ತಿಳಿಸಿದರು.

ಈ ಕಾರ್ಯಕ್ರಮವು ಹಲವಾರು ಪ್ರಮುಖ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುತ್ತದೆ: ಜಿಲ್ಲಾ ಕೌಶಲ್ಯ ಅಭಿವೃದ್ಧಿ ಯೋಜನೆಗಳ ಸೂತ್ರ (DSDPs), ಕೇಂದ್ರ ಯೋಜನೆಗಳೊಂದಿಗೆ ಪರಿಣಾಮಕಾರಿ ಸಮ್ಮಿಲನ ಮತ್ತು ಮುಖ್ಯಮಂತ್ರಿ ಕಲಿಕಾ ಕೌಶಲ್ಯ ಯೋಜನೆ (CMKKY) ಅನುಷ್ಠಾನದ ವಿಮರ್ಶೆ. ಅಧಿಕಾರಿಗಳು CMKKY 2.0 ಅನ್ನು ವಿನ್ಯಾಸಗೊಳಿಸುವ ಮತ್ತು ಜಾರಿಗೊಳಿಸುವ ಕುರಿತು ರಚನಾತ್ಮಕ ಚರ್ಚೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ಫೋಸಿಸ್ ತಜ್ಞರಾದ ಸಂತೋಷ್ ಅನಂತಪುರ, ಡಾ. ಮೀನಾಕ್ಷಿ, ಗಿರಿಜಾ ಮತ್ತು ವಿನಯ್ ವಸಂತ್ ಅವರು ನಾಯಕತ್ವ ಅಭಿವೃದ್ಧಿ, ಕೌಶಲ್ಯ ತರಬೇತಿ ಮತ್ತು ಜಿಲ್ಲಾ ಅಧಿಕಾರಿಗಳ ಪಾತ್ರಗಳು ಮತ್ತು ಜವಾಬ್ದಾರಿಗಳನ್ನು ನಿಭಾಯಿಸುವ ಕುರಿತು ತರಬೇತಿ ನೀಡಲಿದ್ದಾರೆ.

ಪರಿಹಾರಗಳನ್ನು ಗುರುತಿಸುವುದರ ಜೊತೆಗೆ ಜಿಲ್ಲಾಮಟ್ಟದಲ್ಲಿ ಕೇಂದ್ರ ಮತ್ತು ರಾಜ್ಯ ಯೋಜನೆಗಳ ಅನುಷ್ಠಾನದ ಸವಾಲುಗಳ ಬಗ್ಗೆ ತರಬೇತಿ ಕಾರ್ಯಾಗಾರದಲ್ಲಿ ಹೆಚ್ಚಿನ ವಿಷಯ ತಿಳಿದುಕೊಳ್ಳುವ ನಿರೀಕ್ಷೆ ಇದೆ ಎಂದು ಕೆಎಸ್‌ಡಿಸಿ ಅಧ್ಯಕ್ಷರಾದ ಕಾಂತ ನಾಯಕ್ ಹೇಳಿದರು.

ಮಾಜಿ ಅಧಿಕಾರಿ ಮತ್ತು ಕೆಎಸ್‌ಡಿಎ ಅಧ್ಯಕ್ಷರಾದ ವಿ. ರಮಣ ರೆಡ್ಡಿ ಮಾತನಾಡಿ, “ಕರ್ನಾಟಕ ಕೌಶಲ್ಯ ಒಲಿಂಪಿಕ್ಸ್ ಮತ್ತು ಜಿಲ್ಲಾಮಟ್ಟದ ಸ್ಪರ್ಧೆಗಳನ್ನು ಆಯೋಜಿಸುವ ತರಬೇತಿಯನ್ನು ಅಧಿಕಾರಿಗಳು ಪಡೆಯಲಿದ್ದಾರೆ. ಜೊತೆಗೆ ಯುರೋಪ್, ಜಪಾನ್ ಮತ್ತು ಯುಎಇಯಲ್ಲಿ ಉದ್ಯೋಗಾವಕಾಶಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ವಿವರ/ಮಾಹಿತಿ/ಒಳನೋಟ ಪಡೆಯಲಿದ್ದಾರೆ” ಎಂದರು.

ಕೈಗಾರಿಕಾ ಪಾಲುದಾರಿಕೆ ಮತ್ತು ಸ್ಥಳೀಯ ಆರ್ಥಿಕ ಅವಕಾಶಗಳ ಬಗ್ಗೆಯೂ ರಮಣರೆಡ್ಡಿ ಗಮನ ಸೆಳೆದರು. ಆಡಳಿತ ಮಟ್ಟದಲ್ಲಿ ಉದ್ದೇಶಿತ ಸಾಮರ್ಥ್ಯ ವೃದ್ಧಿಯ ಮೂಲಕ ರಾಜ್ಯದ ಕೌಶಲ್ಯ ಅಭಿವೃದ್ಧಿ ಮೂಲ ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಉಪಕ್ರಮವು ಮಹತ್ವದ ಹೆಜ್ಜೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

8 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

11 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

12 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

12 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

12 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

12 hours ago