ಬೆಂಗಳೂರು : ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಬಣ್ಣಿಸಿದರು.
ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದು ಹೇಳಿದರು.
ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಮಾದರಿಯಾಗಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದು ಅವರು ಹೇಳಿದರು.
ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ. ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ. ಸರ್ಕಾರದ ಒಂದು ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ಬಂದಿರುವುದು ಜಾಗತಿಕ ದಾಖಲೆಯಾಗಿದೆ ಎಂದು ರಾಜ್ಯಪಾಲರು ಹೇಳಿದರು.
ನನ್ನ ಸರ್ಕಾರ ಭವಿಷ್ಯದತ್ತ ದೃಷ್ಟಿ ನೆಟ್ಟಿರುವ ಸರ್ಕಾರ. ಈ ಎಂಟು ತಿಂಗಳಲ್ಲಿ 77,000 ಕೋಟಿಗೂ ಹೆಚ್ಚು ಬಂಡವಾಳವು ರಾಜ್ಯಕ್ಕೆ ಹರಿದು ಬಂದಿದೆ. ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್‌ಟಿ ಸಂಗ್ರಹಣೆಯ ಬೆಳವಣಿಗೆ ದರವು ಇಡೀ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಲು ಖುಷಿಪಡುತ್ತೇನೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯವು ದಾಖಲಾರ್ಹ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ ಎಂದು ರಾಜ್ಯಪಾಲರು ತಿಳಿಸಿದರು.
ಇತ್ತೀಚಿನ ವರ್ಷಗಳಲ್ಲಿ ಬಜೆಟ್ನಲ್ಲಿ ಘೋಷಿಸಿದ ಒಟ್ಟು ಘೋಷಣೆಗಳಲ್ಲಿ ಶೇಕಡ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಿ ಕಾರ್ಯಗತಗೊಳಿಸಲಾಗುತ್ತಿರುವುದು ದಾಖಲೆಯ ಸಂಗತಿ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…