ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಮಳೆಯಾಗಲಿದ್ದು, ವಾರಾಂತ್ಯದ ವೇಳೆಗೆ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಇಂದು ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ವಾರಾಂತ್ಯದ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ:- ಪ್ರಧಾನಿಯಾಗಿ 11 ವರ್ಷ ಪೂರೈಸಿದ ನರೇಂದ್ರ ಮೋದಿ
ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರಬೇಕು. ಗುಡುಗು ಸಹಿತ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೈತರು ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





