ಬೆಂಗಳೂರು: ಕೆಪಿಎಸ್‌ಸಿ ನಡೆಸುವ ಕೆಎಎಸ್(384) ಪ್ರಿಲೀಮ್ಸ್ ಮರು ಪರೀಕ್ಷೆಯನ್ನು ಡಿಸೆಂಬರ್ 29ರಂದು ನಿರ್ಧರಿಸಲಾಗಿದೆ ಎಂದು ಅಧಿಕೃತವಾಗಿ ಕೆಪಿಎಸ್‌ಸಿ ತಿಳಿಸಿದೆ.
2024 ಕೆಎಎಸ್ ಎ ಮತ್ತು ಬಿ ವರ್ಗದ 384 ಹುದ್ದೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 27 ರಂದು ಪ್ರಿಲೀಮ್ಸ್ ಪರೀಕ್ಷೆಯನ್ನು ಕೆಪಿಎಸ್‌ಸಿ ನಿರ್ಧರಿಸಿತ್ತು. ಆದರೆ ಈ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸರ್ಪಕವಾಗಿದ್ದ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದರು. ಆದರೆ ಇದೀಗ ಕೆಎಎಸ್ ಮರುಪರೀಕ್ಷೆಯನ್ನು ಡಿಸೆಂಬರ್ 29ಕ್ಕೆ ಮರುಪರೀಕ್ಷೆಯನ್ನು ನಡೆಸಲು ಕೆಪಿಎಸ್‌ಸಿ ಮುಂದಾಗಿದೆ.