Mysore
36
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ.

ಏಪ್ರಿಲ್23 ಮತ್ತು 24ರಂದು ನಡೆದ ಸಿಇಟಿ ಪರೀಕ್ಷೆಯ ಕೀ-ಉತ್ತರಗಳಿಗೆ ಆಕ್ಷೇಪಣೆಗಳು ಏನಾದರು ಇದ್ದರೆ ಏ.30ರೊಳಗೆ ಸಲ್ಲಿಸಬೇಕು. ಇದಕ್ಕೆ ಆನ್‍ಲೈನ್ ಲಿಂಕ್ ಕೂಡ ಬಿಡುಗಡೆ ಮಾಡಿದ್ದು, ಆಕ್ಷೇಪಣೆಗಳ ಜತೆಗೆ ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ಇತ್ಯಾದಿ ಮಾಹಿತಿಯನ್ನು ನಿಖರವಾಗಿ ದಾಖಲಿಸಬೇಕು. ಅಪೂರ್ಣ ಮಾಹಿತಿಯ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ವಿಷಯ ತಜ್ಞರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Tags:
error: Content is protected !!