ಬೆಂಗಳೂರು: ಪಿಎಸ್‌ಐಗಳ ನೇಮಕಾತಿ ಪರೀಕ್ಷೆಯನ್ನು ಡಿಸೆಂಬರ್ ೨೩ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ೨೦೨೧ರಲ್ಲಿ ನಡೆದಿದ್ದ ೫೪೫ ಪಿಎಸ್‌ಐ ಹುದ್ದೆಗಳ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಗಳು ಕೇಳಿ ಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ಕೆಲವು ಪೋಷಕರನ್ನೂ ಸೇರಿದಂತೆ ಹಲವರನ್ನು ಬಂಧಿಸಿ ತನಿಖೆಗೆ ಒಳಪಡಿಸಲಾಗಿತ್ತು.
ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವುದು ಕಂಡುಬಂದ ಹಿನ್ನಲೆಯಲ್ಲಿ, ಅಂದಿನ ಸರ್ಕಾರ ಅಧಿಸೂಚನೆಯನ್ನು ರದ್ದುಗೊಳಿಸಿ ಮರು ಪರೀಕ್ಷೆಗೆ ಅದೇಶ ನೀಡಿತ್ತು. ಸರ್ಕಾರದ ಈ ನಿರ್ಧಾರವನ್ನು ಕೆಲವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಸತತ ಎರಡು ವರ್ಷಗಳ ವಿಚಾರಣೆಯ ಬಳಿಕ ಇತ್ತೀಚೆಗೆ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿತ್ತು.
ಈ ಹಿನ್ನಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಪಿಎಸ್‌ಐಗಳ ಮರು ನೇಮಕಾತಿ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳುತ್ತಿದೆ. ಪರೀಕ್ಷೆಗೆ ೧೬ ರೀತಿಯ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಲಾಗುತ್ತಿದ್ದು, ಡಿಸೆಂಬರ್ ೨೩ರಂದು ಬೆಂಗಳೂರಿನಲ್ಲಿ ಸಬ್‌ಇನ್‌ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಧಿಕಾರ ನಿರ್ದೇಶಕಿ ರಮ್ಯ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.