ಬೆಂಗಳೂರು: ಕೆಇಎ ಸೀಟುಗಳ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಹಗರಣದ ಕಿಂಗ್‌ಪಿನ್ ಆಗಿರುವ ಹರ್ಷ, ರವಿಶಂಕರ್, ಶಶಿಕುಮಾರ್, ಪುನೀತ್, ಪ್ರಕಾಶ್, ಪುರುಷೋತ್ತಮ್, ಅವಿನಾಶ್ ಸೇರಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಕೆಇಎ ಆಡಳಿತಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಕೆಇಎ ನೌಕರ ಅವಿನಾಶ್ ಸೇರಿದಂತೆ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಕೆಇಎ ನೌಕರ ಅವಿನಾಶ್ ಸಹಾಯದಿಂದ ಲಕ್ಷಾಂತರ ರೂಪಾಯಿ ಹಣಕ್ಕೆ ಸೀಟುಗಳನ್ನು ಅಕ್ರಮವಾಗಿ ಡೀಲ್ ಮಾಡುತ್ತಿದ್ದರು ಎಂದು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಸೀಟು ಬ್ಲಾಕ್ ಮಾಡಿ ಕೋಟಿ ಕೋಟಿ ಹಣಕ್ಕೆ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಹಗರಣದಲ್ಲಿ ಪ್ರತಿಷ್ಠಿತ ಕಾಲೇಜುಗಳು ಸಹ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಮಲ್ಲೇಶ್ವರಂ ಠಾಣೆ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದು, ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ನಡುಕ ಶುರುವಾಗಿದೆ ಎನ್ನಲಾಗಿದೆ.
ಸದ್ಯ ಬಂಧಿತ ಆರೋಪಿಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಹಗರಣದ ಬಗ್ಗೆ ಇನ್ನಷ್ಟು ಸ್ಫೋಟಕ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ.