ಶಿವಮೊಗ್ಗ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯುವ ನಿರ್ಧಾರ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ ಎಂದು ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಕಿಡಿ ಕಾರಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಚಿವ ಸಂಪುಟ ಹಿಂತೆಗೆದುಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ.ಕಳ್ಳ ಯಾವತ್ತಿದ್ದರೂ ಕಳ್ಳನೇ. 135 ಸೀಟ್ ಬಂದಿದೆ ಎಂದು ಮಾಡಬಾರದ ಕೆಲಸವನ್ನೆಲ್ಲಾ ಮಾಡುತ್ತಿದ್ದಾರೆ. 23 ಕೋಟಿ ಇದ್ದ ಡಿಕೆ ಶಿವಕುಮಾರ್ ಆದಾಯ ದಿಢೀರನೆ 163 ಕೋಟಿಗೆ ಏರಿಕೆಯಾಗಿದೆ. ಬಿಎಸ್ ವೈ ಸಿಎಂ ಆಗಿದ್ದಾಗ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿತ್ತು. ಆಗ ಡಿಕೆಶಿ ನ್ಯಾಯಾಲಯಕ್ಕೆ ಹೋದರೂ ಕೂಡ ಪ್ರಕರಣ ತಿರಸ್ಕಾರವಾಗಿತ್ತು.
ಈಗ ಪ್ರಕರಣ ಅಂತಿಮ ಹಂತಕ್ಕೆ ಬಂದಿದೆ. ಇಂತಹ ಸಂದ್ಭದಲ್ಲಿ ಈ ರೀತಿ ಮಾಡುವುದು ಸರಿ ಅಲ್ಲ ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ. ಕೇಡಿ ಸಿದ್ದು ಅವರ ದರೋಡೆಕೋರರ ಗುಂಪು ದುರುಪಯೋಗಪೆಇಸಿಕೊಂಡಿದೆ ಎಂದು ತಿವಿದಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ಈ ನಿರ್ಧಾರವನ್ನು ಹಿಂಪಡೆಯಲು ನೆನ್ನೆ (ಗುರುವಾರ) ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸರ್ಕಾರದ ಈ ನಡೆಯನ್ನು ಈಶ್ವರಪ್ಪ ತೀವ್ರವಾಗಿ ಖಂಡಿಸಿದ್ದಾರೆ.
ಇನ್ನು ಜಾತಿಗಣತಿಯ ವಿಚಾರವಾಗಿ ಮಾತನಾಡಿ ಈಶ್ವರಪ್ಪ ಜಾತಿ ಗಣತಿ ವಿಚಾರದಲ್ಲಿ ಸಿದ್ದರಾಮಯ್ಯ 9 ವರ್ಷದ ಕೆಳಗೆ ಒಂದು ವಾರದಲ್ಲಿ ವರದಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದರು. ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಬಿಡುಗಡೆ ಮಾಡಿಲ್ಲ ಎಲ್ಲಾ ಜಾತಿಗಳ ನಡುವೆ ಸಂಘರ್ಷ ತಂದಿಟ್ಟಿದ್ದಾರೆ ಎಂದರು.