ರಾಜ್ಯ

ದೇವರು-ಧರ್ಮದ ಹೆಸರಲ್ಲಿ ದೇಶ-ರಾಜ್ಯ ಒಡೆಯುವ ಬಿಜೆಪಿಯನ್ನು ದೂರ ಇಡಿ: ಸಿ.ಎಂ.ಸಿದ್ದರಾಮಯ್ಯ ಕರೆ

ಸವದತ್ತಿ: ದೇವರು-ಧರ್ಮದ ಹೆಸರಲ್ಲಿ ದೇಶ ಹಾಗೂ ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ. ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ ಎಂದರು.

ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಬಿಜೆಪಿಯವರು ಭಯಾನಕ ಮಾತಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ದೇವರು, ಧರ್ಮದ ಹೆಸರಲ್ಲಿ ಮನುಷ್ಯರನ್ನು ದ್ವೇಷಿಸಿ ಎಂದು ಎಲ್ಲೂ ಹೇಳಿಲ್ಲ ಎಂದರು.

ಗೃಹಲಕ್ಷ್ಮಿ ಯೋಜನೆ ಜಾರಿಯಾದರೆ ಅತ್ತೆ ಸೊಸೆ ಜಗಳ ಆಗ್ತದೆ ಎಂದು ಬಿಜೆಪಿಯವರು ಬೊಬ್ಬೆ ಹೊಡೆದರು. ಆದರೆ ಗೃಹಲಕ್ಷ್ಮಿ ಹಣವನ್ನು ಕೂಡಿಸಿಟ್ಟು ಅತ್ತೆಯರು ಸೊಸೆಯರಿಗೆ ಬಳೆ ಅಂಗಡಿ ಹಾಕಿಕೊಟ್ಟಿದ್ದಾರೆ, ಟೈಲರಿಂಗ್ ಮೆಷಿನ್ ಕೊಡಿಸಿದ್ದಾರೆ. ಇಂಥವು ನೂರಾರು ಉದಾಹರಣೆಗಳಿವೆ ಎಂದರು.

ತಾಯಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ. ನಿಮ್ಮ ಸಹಕಾರ ಅಗತ್ಯ. ಕ್ಷೇತ್ರದಲ್ಲಿ ಅನಧಿಕೃತವಾಗಿ ಮಳಿಗೆಗಳನ್ನು ಹಾಕಬೇಡಿ. ಅನಧಿಕೃತವಾಗಿ ಇರುವವರಿಗೆ ಬೇರೆ ವ್ಯವಸ್ಥೆ ಮಾಡೋಣ. ಆದರೆ ಅಕ್ರಮವಾಗಿ ಯಾರೂ ಮಳಿಗೆ ಹಾಕದೆ ಸಹಕರಿಸಿ ಎಂದು ಕರೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ವಿಶ್ವಾಸ್ ವೈದ್ಯ ಅವರು ವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

1 hour ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

3 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago