ರಾಜ್ಯ

ಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು.

ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸರ್ಕಾರ ಬೆಂಗಳೂರು ಅಭಿವೃದ್ಧಿಗೊಳಿಸುವ ಕನಸನ್ನು ನನಸು ಮಾಡಲಿದೆ
ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

ಹುಲಿಗಳ ಸಾವು: ತನಿಖಾ ವರದಿಯ ನಂತರ ಕ್ರಮ
ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

4 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

10 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

14 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

14 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

14 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

17 hours ago