Mysore
24
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕಲಾವಿದೆಯರಿಗೆ ಲೈಂಗಿಕ ಕಿರುಕುಳ ಪ್ರಕರಣ: ಕೇರಳ ಸರ್ಕಾರದ ವಿರುದ್ಧ ಜೆ.ಪಿ.ನಡ್ಡಾ ವಾಗ್ದಾಳಿ

ಕೇರಳ: ಕಲಾವಿದೆಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ಪ್ರಕರಣದಲ್ಲಿ ಕೇರಳ ಸರ್ಕಾರದವರೂ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಗಂಭೀರ ಆರೋಪ ಮಾಡಿದ್ದಾರೆ.

ಮಲಯಾಳಂ ಸಿನಿಮಾರಂಗದಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆಡಳಿತರೂಢ ಸಿಪಿಐ ಪಕ್ಷದವರೂ ಭಾಗಿಯಾಗಿದ್ದಾರೆ. ಹೀಗಾಗಿ ಕೇರಳ ಸರ್ಕಾರ ಸಂತ್ರಸ್ತೆಯರಿಗೆ ನ್ಯಾಯ ಒದಗಿಸಲು ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿದರು.

ಈ ಬಗ್ಗೆ ಪಾಲಕ್ಕಾಡ್‌ನಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರೊಂದಿಗೆ ಸಂವಾದ ನಡೆಸಿದ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು, ಚಿತ್ರರಂಗದ ಬೆಳವಣಿಗೆ ಕುರಿತು ಮಾತನಾಡಿದ್ದು, ಕೇರಳ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಕಮ್ಯುನಿಸ್ಟ್‌ ಪಕ್ಷದವರೂ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಬಹಳ ಸ್ಪಷ್ಟವಾಗಿ ಹೇಳಿದೆ. ಇದನ್ನು ಹೇಳಲು ನಮಗೆ ತೀವ್ರ ಬೇಸರವಾಗುತ್ತಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್‌ ಈ ಬಗ್ಗೆ ಮೌನ ವಹಿಸಬಾರದು. ತಕ್ಷಣವೇ ಈ ಬಗ್ಗೆ ಎಲ್ಲರಿಗೂ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

 

 

Tags: