ಕೇರಳ: ಕಲಾವಿದೆಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ಪ್ರಕರಣದಲ್ಲಿ ಕೇರಳ ಸರ್ಕಾರದವರೂ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಗಂಭೀರ ಆರೋಪ ಮಾಡಿದ್ದಾರೆ.
ಮಲಯಾಳಂ ಸಿನಿಮಾರಂಗದಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆಡಳಿತರೂಢ ಸಿಪಿಐ ಪಕ್ಷದವರೂ ಭಾಗಿಯಾಗಿದ್ದಾರೆ. ಹೀಗಾಗಿ ಕೇರಳ ಸರ್ಕಾರ ಸಂತ್ರಸ್ತೆಯರಿಗೆ ನ್ಯಾಯ ಒದಗಿಸಲು ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿದರು.
ಈ ಬಗ್ಗೆ ಪಾಲಕ್ಕಾಡ್‌ನಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರೊಂದಿಗೆ ಸಂವಾದ ನಡೆಸಿದ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು, ಚಿತ್ರರಂಗದ ಬೆಳವಣಿಗೆ ಕುರಿತು ಮಾತನಾಡಿದ್ದು, ಕೇರಳ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ಕಮ್ಯುನಿಸ್ಟ್ ಪಕ್ಷದವರೂ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಬಹಳ ಸ್ಪಷ್ಟವಾಗಿ ಹೇಳಿದೆ. ಇದನ್ನು ಹೇಳಲು ನಮಗೆ ತೀವ್ರ ಬೇಸರವಾಗುತ್ತಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಈ ಬಗ್ಗೆ ಮೌನ ವಹಿಸಬಾರದು. ತಕ್ಷಣವೇ ಈ ಬಗ್ಗೆ ಎಲ್ಲರಿಗೂ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
ವಕ್ಫ್ ನಲ್ಲಿ ಜಮೀನು ಲೂಟಿಯಾಗಿದ್ದರೆ ಸಿಬಿಐ ತನಿಖೆಗೆ ವಹಿಸಿ: ಪ್ರತಿಪಕ್ಷ ನಾಯಕ ಕೋಲಾರ: ವಕ್ಫ್ ಅಧಿಕಾರಿಗಳು ರೈತರ ಬಳಿ ಬಂದರೆ…
ಮಂಡ್ಯ: ಇಲ್ಲಿನ ಬೂದನೂರು ಗ್ರಾಮದ ಬಳಿ ಅನ್ಯಕ್ರಾಂತವಾಗದ ಜಮೀನಿನಲ್ಲಿ ಹುಕ್ಕಾ ಬಾರ್ ನಡೆಸಲು ಅನಧಿಕೃತ ಲೈಸೆನ್ಸ್ ನೀಡಿದ ಪಿಡಿಓ ವಿನಯ್ಕುಮಾರ್ನನ್ನು…
ಮಡಿಕೇರಿ: ಶನಿವಾರಸಂತೆಯ ವಿಜಯ ವಿನಾಯಕ ದೇವಾಲಯದಲ್ಲಿ ಭಾನುವಾರ ರಾತ್ರಿ ಬಾಗಿಲು ಮುರಿದು ದೇವಾಲಯದ ಒಳಗಡೆ ಇದ್ದ ಹುಂಡಿ ಹೊತ್ತು ಕಳ್ಳರು…
ಬೆಂಗಳೂರು: ಇನ್ನೂ ತಮ್ಮ ತಮ್ಮ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್(ಎಚ್ಎಸ್ಆರ್ಪಿ) ಅಳವಡಿಕೆ ಮಾಡದ ವಾಹನ ಸವಾರರಿಗೆ ರಾಜ್ಯ ಸರ್ಕಾರ…
ಮೈಸೂರು : ಸಾಂಸ್ಕೃತಿಕ ನಗರದಲ್ಲಿ ಇದೀಗ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದ್ದು ಯುವತಿಯ ಸ್ನೇಹಿತರಿಬ್ಬರು ವಿಜಯನಗರದ ಖಾಸಗಿ ಹೋಟೆಲ್…
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಗೆದ್ದರೆ ಚನ್ನಪಟ್ಟಣ ತಾಲೂಕಿನ ಸಮಗ್ರ ಅಭಿವೃದ್ಧಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು.…