ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.
ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ. ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…