ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಉಂಟಾದ ಲೋಪದೋಷದಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಮೋಸವಾಗಿದ್ದು, ಮರು ಪರೀಕ್ಷೆ ನಡೆಸುವಂತೆ ಬಿಜೆಪಿಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ, ಕೆಎಎಸ್ ಪರೀಕ್ಷೆಗಳನ್ನು ಮುಂದೂಡಬೇಕು ಎಂಬ ಆಗ್ರಹ ಮೊದಲಿನಿಂದಲೂ ಕೇಳಿ ಬರುತ್ತಿದ್ದರೂ ಭಂಡ ಕಾಂಗ್ರೆಸ್ ಸರ್ಕಾರ ಅದಕ್ಕೆ ಏಕೆ ಕಿವಿಗೊಡಲಿಲ್ಲ ಎಂಬುದಕ್ಕೆ ಸದ್ಯ ಕೆಎಎಸ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳೇ ಸಾಕ್ಷಿ.
ಸಂಧಿ-ಸಮಾಸದ ಬಗ್ಗೆ ಭಾಷಣ ಮಾಡುವ, ಕನ್ನಡರಾಮಯ್ಯ ಎಂದು ವಂದಿಮಾಗಧರಿಂದ ಕರೆಸಿಕೊಳ್ಳುವ ಸಿಎಂ ಸಿದ್ದರಾಮಯ್ಯನವರೆ, ಪ್ರಶ್ನೆ ಪತ್ರಿಕೆಯ 70 ಪ್ರಶ್ನೆಗಳ ಪೈಕಿ 60 ಪ್ರಶ್ನೆಗಳು ತಪ್ಪಿನಿಂದಲೇ ತುಂಬಿದ್ದವು. ಸಹಸ್ರಾರು ಅಭ್ಯರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುವ ಬದಲು, ಕೂಡಲೇ ಕೆಎಎಸ್ ಮರು ಪರೀಕ್ಷೆಗೆ ಆದೇಶ ನೀಡಬೇಕು ಎಂದು ಆಗ್ರಹಿಸಿದೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…