ಬೀದರ್: ಬಿಜೆಪಿ ಶಾಸಕ ಬಸವಗೌಡ ಪಾಟೀಲ ಯತ್ನಾಳ್ ಅವರು ಆರ್‌ಎಸ್‌ಎಸ್ ಅವರನ್ನು ಖುಷಿಪಡಿಸಲು ವಿಶ್ವಗುರು ಬಸವಣ್ಣನವರ ಬಗ್ಗೆ ಲಘು ಹಾಗೂ ಹಗುರವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.
ಬೀದರ್‌ನಲ್ಲಿ ಇಂದು(ಡಿ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ವಕ್ಫ್ ಮಂಡಳಿ ಪ್ರತಿಭಟನೆ ವೇಳೆ ನಾವೆಲ್ಲರೂ ಹೋರಾಟಕ್ಕೆ ಹೆದರಿ ಹೋರಾಟ ಮಾಡದಿದ್ದರೆ, ಬಸವಣ್ಣನವರ ರೀತಿ ಹೊಳೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂಬ ಹೇಳಿಕೆ ನೀಚ ಕೆಲಸದಂತಿದೆ. ವಿನಾಶಕಾಲ ವಿಪರೀತ ಬುದ್ಧಿ ಎಂಬ ಗಾದೆಯಂತೆ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅದರ ಫಲವನ್ನು ಬಸವಣ್ಣನವರ ಭಕ್ತರು ನೀಡುತ್ತಾರೆ ಎಂದು ಹೇಳಿದ್ದಾರೆ.
ಯತ್ನಾಳ್ ವೈಯಕ್ತಿಕ ಸ್ವಾರ್ಥ ಮತ್ತು ಪಕ್ಷದ ಆಂತರಿಕ ಕಲಹಗಳ ಸ್ವಾರ್ಥಕ್ಕಾಗಿ ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಎಲ್ಲಾ ನಾಟಕಗೊತ್ತಿರುವ ಬಿಜೆಪಿ ನಾಯಕರು ಸುಮ್ಮನಿದ್ದು, ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರೂ ಪ್ರತಿಕ್ರಿಯೆ ನೀಡುತ್ತಿಲ್ಲ. ಅಲ್ಲದೇ ಚುನಾವಣೆ ಸಂದರ್ಭದಲ್ಲಿ ಬಸವ ಭಕ್ತರ ಹತ್ತಿರ ಮತ ಕೇಳುವ ಬಿಜೆಪಿಯವರು ಇಂದು ಮೌನಂ ಸಮ್ಮತಿ ಲಕ್ಷಣಂ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಯತ್ನಾಳ್ ಜೋಕರ್ ಅಷ್ಟೇ ಅಲ್ಲ, ಮಾನಸಿಕ ರೋಗಿಯೂ ಹೌದು. ಹೀಗಾಗಿ ಅವರು ವೈದ್ಯರ ಬಳಿ ಚಿಕಿತ್ಸೆ ಪಡೆಯುವುದು ಸೂಕ್ತವಾಗಿದೆ. ಯತ್ನಾಳ್ ಹೇಳಿಕೆಯಿಂದ ಬಸವ ಭಕ್ತರಿಗೆ ನೋವು ಉಂಟಾಗಿದ್ದು, ಇದಕ್ಕೆ ಬಿಜೆಪಿ ನಾಯಕರು ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…
ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…
ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…