ಬೀದರ್: ಬಿಜೆಪಿ ಶಾಸಕ ಬಸವಗೌಡ ಪಾಟೀಲ ಯತ್ನಾಳ್ ಅವರು ಆರ್‌ಎಸ್‌ಎಸ್ ಅವರನ್ನು ಖುಷಿಪಡಿಸಲು ವಿಶ್ವಗುರು ಬಸವಣ್ಣನವರ ಬಗ್ಗೆ ಲಘು ಹಾಗೂ ಹಗುರವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.
ಬೀದರ್‌ನಲ್ಲಿ ಇಂದು(ಡಿ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ವಕ್ಫ್ ಮಂಡಳಿ ಪ್ರತಿಭಟನೆ ವೇಳೆ ನಾವೆಲ್ಲರೂ ಹೋರಾಟಕ್ಕೆ ಹೆದರಿ ಹೋರಾಟ ಮಾಡದಿದ್ದರೆ, ಬಸವಣ್ಣನವರ ರೀತಿ ಹೊಳೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂಬ ಹೇಳಿಕೆ ನೀಚ ಕೆಲಸದಂತಿದೆ. ವಿನಾಶಕಾಲ ವಿಪರೀತ ಬುದ್ಧಿ ಎಂಬ ಗಾದೆಯಂತೆ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅದರ ಫಲವನ್ನು ಬಸವಣ್ಣನವರ ಭಕ್ತರು ನೀಡುತ್ತಾರೆ ಎಂದು ಹೇಳಿದ್ದಾರೆ.
ಯತ್ನಾಳ್ ವೈಯಕ್ತಿಕ ಸ್ವಾರ್ಥ ಮತ್ತು ಪಕ್ಷದ ಆಂತರಿಕ ಕಲಹಗಳ ಸ್ವಾರ್ಥಕ್ಕಾಗಿ ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಎಲ್ಲಾ ನಾಟಕಗೊತ್ತಿರುವ ಬಿಜೆಪಿ ನಾಯಕರು ಸುಮ್ಮನಿದ್ದು, ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರೂ ಪ್ರತಿಕ್ರಿಯೆ ನೀಡುತ್ತಿಲ್ಲ. ಅಲ್ಲದೇ ಚುನಾವಣೆ ಸಂದರ್ಭದಲ್ಲಿ ಬಸವ ಭಕ್ತರ ಹತ್ತಿರ ಮತ ಕೇಳುವ ಬಿಜೆಪಿಯವರು ಇಂದು ಮೌನಂ ಸಮ್ಮತಿ ಲಕ್ಷಣಂ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಯತ್ನಾಳ್ ಜೋಕರ್ ಅಷ್ಟೇ ಅಲ್ಲ, ಮಾನಸಿಕ ರೋಗಿಯೂ ಹೌದು. ಹೀಗಾಗಿ ಅವರು ವೈದ್ಯರ ಬಳಿ ಚಿಕಿತ್ಸೆ ಪಡೆಯುವುದು ಸೂಕ್ತವಾಗಿದೆ. ಯತ್ನಾಳ್ ಹೇಳಿಕೆಯಿಂದ ಬಸವ ಭಕ್ತರಿಗೆ ನೋವು ಉಂಟಾಗಿದ್ದು, ಇದಕ್ಕೆ ಬಿಜೆಪಿ ನಾಯಕರು ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…