Mysore
24
mist

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಕರ್ನಾಟಕಕ್ಕೆ 18ಸಾವಿರ ಕೋಟಿ ನೀಡಲು ಕೇಂದ್ರಕ್ಕೆ ಖರ್ಗೆ ಮನವಿ

ನವದೆಹಲಿ: ತೀವ್ರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯಿಂದ (ಎನ್‌ಡಿಆರ್‌ಎಫ್) 18,171 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಮಲ್ಲಿಕಾರ್ಜುನ್ ಖರ್ಗೆ ಬುಧವಾರ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.

ಶೂನ್ಯ ವೇಳೆಯಲ್ಲಿ ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಅಧ್ಯಕ್ಷರು, ಕರ್ನಾಟಕವು 123 ವರ್ಷಗಳಲ್ಲಿ ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದೆ ಮತ್ತು ಬೆಳೆ ಹಾನಿ ಅಂದಾಜು 35,162 ಕೋಟಿ ರೂ.ಆಗಿದೆ. ಬೆಳೆಗಳಿಗೆ ಹಾನಿಯು 40-90 ರಷ್ಟಾಗಿದೆ.

ಸಂತ್ರಸ್ತರ ನೆರವಿಗಾಗಿ ರಾಜ್ಯ ಸರ್ಕಾರ ಎನ್‌ಡಿಆರ್‌ಎಫ್‌ನಿಂದ 18,171 ಕೋಟಿ ರೂ.ಗಳನ್ನು ಕೋರಿದೆ ಎಂದು ಖರ್ಗೆ ಹೇಳಿದರು.
ವಿವಿಧ ಜಲಾಶಯಗಳಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಬಹುದು ಎಂದು ಅವರು ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ