ನವದೆಹಲಿ: ತೀವ್ರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯಿಂದ (ಎನ್‌ಡಿಆರ್‌ಎಫ್) 18,171 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಮಲ್ಲಿಕಾರ್ಜುನ್ ಖರ್ಗೆ ಬುಧವಾರ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.
ಶೂನ್ಯ ವೇಳೆಯಲ್ಲಿ ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಅಧ್ಯಕ್ಷರು, ಕರ್ನಾಟಕವು 123 ವರ್ಷಗಳಲ್ಲಿ ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದೆ ಮತ್ತು ಬೆಳೆ ಹಾನಿ ಅಂದಾಜು 35,162 ಕೋಟಿ ರೂ.ಆಗಿದೆ. ಬೆಳೆಗಳಿಗೆ ಹಾನಿಯು 40-90 ರಷ್ಟಾಗಿದೆ.
ಸಂತ್ರಸ್ತರ ನೆರವಿಗಾಗಿ ರಾಜ್ಯ ಸರ್ಕಾರ ಎನ್‌ಡಿಆರ್‌ಎಫ್‌ನಿಂದ 18,171 ಕೋಟಿ ರೂ.ಗಳನ್ನು ಕೋರಿದೆ ಎಂದು ಖರ್ಗೆ ಹೇಳಿದರು.
ವಿವಿಧ ಜಲಾಶಯಗಳಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಬಹುದು ಎಂದು ಅವರು ತಿಳಿಸಿದರು.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…