ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಸಿಕ್ಕಿ ನಟಿ ರನ್ಯಾರಾವ್ ಅವರಿಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಕೈಗಾರಿಕಾ ಭೂಮಿಯನ್ನು ಮಂಜೂರು ಮಾಡಲಾಗಿತ್ತು ಎಂಬ ವರದಿ ಬೆನ್ನಲ್ಲೇ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಪಷ್ಟನೆ ನೀಡಿದೆ.
ನಟಿ ರನ್ಯಾರಾವ್ ಅವರಿಗೆ 023ರ ಜನವರಿ 2ರಂದು ತುಮಕೂರು ಜಿಲ್ಲೆಯ ಶಿರಾ ಕೈಗಾರಿಕಾ ಪ್ರದೇಶದಲ್ಲಿ ಕ್ಷೀರೋಡಾ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ 12 ಎಕರೆ ಜಮೀನು ಅನ್ನು ಮಂಜೂರು ಮಾಡಲಾಗಿದೆ. ಅಂದರೆ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಮೊದಲೇ ಜಮೀನು ಮಂಜೂರಾಗಿದೆ ಎಂದು ಕೆಐಎಡಿಬಿ ಸಿಇಒ ಮಹೇಶ್ ಹೇಳಿದ್ದಾರೆ.
ಭೂ ಹಂಚಿಕೆಯನ್ನು 137 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮತಿ ಸಮಿತಿ ಅನುಮೋದಿಸಿದ್ದು, ಸಾಧಕ-ಬಾಧಕಗಳನ್ನು ಚರ್ಚಿಸಿ ಜಮೀನು ಅನ್ನು ಮಂಜೂರು ಮಾಡಲಾಗಿದೆ. ಅಲ್ಲದೇ ನಟಿ ರನ್ಯರಾವ್ ಅವರ ಕಂಪನಿಯು ಸ್ಟೀಲ್ ಟಿಎಂಟಿ ಬಾರ್‌ಗಳು, ರಾಡ್‌ಗಳು ಹಾಗೂ ಸಂಬಂಧಿತ ಉತ್ಪನ್ನಗಳ ಉತ್ಪಾದನಾ ಘಟಕವನ್ನು 138 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲು ಪ್ರಸ್ತಾಪಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ, ಆ ಜಮೀನಿನಲ್ಲಿ ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯ ಸರ್ಕಾರದಿಂದ 2 ವರ್ಷಗಳ ಅವಧಿಯವರೆಗೂ ಒಪ್ಪಂದ ಮಾಡಿಕೊಂಡು ಭೂಮಿಯನ್ನು ಮಂಜೂರು ಮಾಡಲಾಗಿತ್ತು. ಆದರೆ ಆ ಸ್ಥಳದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ಇರುವ ಕಾರಣ ರನ್ಯಾ ರಾವ್ ಒಡೆತನದ 12 ಎಕರೆ ಭೂಮಿಯನ್ನು ಕೆಐಎಡಿಬಿ ವಾಪಸ್ ಪಡೆಯಲಾಗುತ್ತದೆ ಎಂದರು.