ರಾಜ್ಯ

ಕಾಂಗ್ರೆಸ್‌ ಅವಧಿಯಲ್ಲಿ ನಟಿ ರನ್ಯಾರಾವ್‌ಗೆ ಕೈಗಾರಿಕಾ ಜಮೀನು ಮಂಜೂರು ಆಗಿಲ್ಲ: ಕೆಐಎಡಿಇ ಸ್ಪಷ್ಟನೆ

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಿಕ್ಕಿ ನಟಿ ರನ್ಯಾರಾವ್‌ ಅವರಿಗೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೇ ಕೈಗಾರಿಕಾ ಭೂಮಿಯನ್ನು ಮಂಜೂರು ಮಾಡಲಾಗಿತ್ತು ಎಂಬ ವರದಿ ಬೆನ್ನಲ್ಲೇ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಪಷ್ಟನೆ ನೀಡಿದೆ.

ನಟಿ ರನ್ಯಾರಾವ್‌ ಅವರಿಗೆ 023ರ ಜನವರಿ 2ರಂದು ತುಮಕೂರು ಜಿಲ್ಲೆಯ ಶಿರಾ ಕೈಗಾರಿಕಾ ಪ್ರದೇಶದಲ್ಲಿ ಕ್ಷೀರೋಡಾ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ 12 ಎಕರೆ ಜಮೀನು ಅನ್ನು ಮಂಜೂರು ಮಾಡಲಾಗಿದೆ. ಅಂದರೆ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಮೊದಲೇ ಜಮೀನು ಮಂಜೂರಾಗಿದೆ ಎಂದು ಕೆಐಎಡಿಬಿ ಸಿಇಒ ಮಹೇಶ್‌ ಹೇಳಿದ್ದಾರೆ.

ಭೂ ಹಂಚಿಕೆಯನ್ನು 137 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮತಿ ಸಮಿತಿ ಅನುಮೋದಿಸಿದ್ದು, ಸಾಧಕ-ಬಾಧಕಗಳನ್ನು ಚರ್ಚಿಸಿ ಜಮೀನು ಅನ್ನು ಮಂಜೂರು ಮಾಡಲಾಗಿದೆ. ಅಲ್ಲದೇ ನಟಿ ರನ್ಯರಾವ್ ಅವರ ಕಂಪನಿಯು ಸ್ಟೀಲ್ ಟಿಎಂಟಿ ಬಾರ್‌ಗಳು, ರಾಡ್‌ಗಳು ಹಾಗೂ ಸಂಬಂಧಿತ ಉತ್ಪನ್ನಗಳ ಉತ್ಪಾದನಾ ಘಟಕವನ್ನು 138 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲು ಪ್ರಸ್ತಾಪಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ, ಆ ಜಮೀನಿನಲ್ಲಿ ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರದಿಂದ 2 ವರ್ಷಗಳ ಅವಧಿಯವರೆಗೂ ಒಪ್ಪಂದ ಮಾಡಿಕೊಂಡು ಭೂಮಿಯನ್ನು ಮಂಜೂರು ಮಾಡಲಾಗಿತ್ತು. ಆದರೆ ಆ ಸ್ಥಳದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ಇರುವ ಕಾರಣ ರನ್ಯಾ ರಾವ್‌ ಒಡೆತನದ 12 ಎಕರೆ ಭೂಮಿಯನ್ನು ಕೆಐಎಡಿಬಿ ವಾಪಸ್‌ ಪಡೆಯಲಾಗುತ್ತದೆ ಎಂದರು.

ಅರ್ಚನ ಎಸ್‌ ಎಸ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

10 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

13 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

13 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

17 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

22 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

22 hours ago