Mysore
21
overcast clouds

Social Media

ಬುಧವಾರ, 09 ಜುಲೈ 2025
Light
Dark

ನಟ ಕಿಚ್ಚ ಸುದೀಪ್‌ ತಾಯಿ ನಿಧನ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್‌ ಅವರು ಭಾನುವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

ಇಂದು(ಅ.20)ಮಧ್ಯಾಹ್ನ ಬೆಂಗಳೂರಿನ ಜೆಪಿ ನಗರದಲ್ಲಿರುವ ಸುದೀಪ್‌ ಅವರ ನಿವಾಸದಲ್ಲಿ ಸರೋಜಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನೆರವೇರಲಿದೆ.

ನಟ ಸುದೀಪ್‌ ಸೇರಿದಂತೆ ಮೂವರು ಮಕ್ಕಳನ್ನು ಸರೋಜಾ ಅಗಲಿದ್ದಾರೆ. ಸುದೀಪ್‌ ಅವರ ಅಭಿಮಾನಿಗಳು, ಚಿತ್ರರಂಗದ ಆಪ್ತರು, ಸ್ನೇಹಿತರು ಸರೋಜಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

 

 

Tags:
error: Content is protected !!