ಬೆಂಗಳೂರು : ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ತನಿಖೆ ಪೂರ್ಣ ಹಂತ ತಲುಪಿದ್ದು, ಈಗಾಗಲೇ ೧೦೦ಕ್ಕೂ ಹೆಚ್ಚು ಸಾಕ್ಷ್ಯಗಳನ್ನ ಕಲೆಹಾಕಲಾಗಿದೆ. ಅಲ್ಲದೆ ಎಸ್ ಐಟಿ ಅಧಿಕಾರಿಗಳು ಈ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಕೂಡ ನಡೆಸಿದ್ದಾರೆ.
ಮಹಿಳೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಎಸ್ ಐಟಿಗೆ ವಹಿಸಲಾಯಿತು. ಈ ಸಂಬಂಧವಾಗಿ ರೇವಣ್ಣ ಸೇರಿದಂತೆ ೮ ಜನರನ್ನ SIT ಕೂಡ ಬಂಧಿಸಿತ್ತು. ರೇವಣ್ಣಕೂಡ ಹತ್ತು ದಿನ ಜೈಲುವಾಸವನ್ನು ಅನುಭವಿಸಿ ಬಂದಿದ್ದರು.
ಇದೀಗ ಈ ಪ್ರಕರಣದ ತನಿಖೆ ಬಹುತೇಕ ಸಂಪೂರ್ಣಗೊಂಡಿದ್ದು, ೨೫ ಕಡೆ ಸ್ಥಳ ಮಹಜರು, ಸಾಕ್ಷಿಗಳ ಹೇಳಿಕೆ, ಡಿಜಿಟಲ್ ಸಾಕ್ಷ್ಯಗಳನ್ನ ಸೇರಿ ಒಟ್ಟು ೧೦೦ಕ್ಕೂ ಹೆಚ್ಚು ಮಹತ್ವದ ಸಾಕ್ಷ್ಯಗಳನ್ನ ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ಎಸ್ ಐಟಿ ತಂಡ ತಯಾರಿ ನಡೆಸಿದೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…