ರಾಜ್ಯ

ಹಾಡಹಗಲೇ ಮನೆಗೆ ನುಗ್ಗಿ ಮಹಿಳೆ ಕೊಂದು ಚಿನ್ನದ ಸರ ಕಸಿದು ಪರಾರಿ

ಬೆಂಗಳೂರು: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ಕೆಂಗೇರಿಯ ಕೋಣಸಂದ್ರ ನಿವಾಸಿ ದಿವ್ಯ (36) ಕೊಲೆಯಾದವರು. ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯ ನಡುವೆ ಕೃತ್ಯ ನಡೆದಿದೆ ಎನ್ನಲಾಗಿದೆ. ಮೃತಳ ಪತಿ ಗುರುಮೂರ್ತಿ ಶುಕ್ರವಾರ ಮಧ್ಯಾಹ್ನ ಪತ್ನಿಗೆ ಕರೆ ಮಾಡಿದಾಗ ಕರೆ ಸ್ವೀಕರಿಸಲಿಲ್ಲ. ಹಲವು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ಇದರಿಂದ ಅನುಮಾನಗೊಂಡು ಮನೆಗೆ ಬಂದು ನೋಡಿದಾಗ ಕೃತ್ಯ ನಡೆದಿರುವುದು ಗೊತ್ತಾಗಿದೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಿವ್ಯಾ ಕೊಲೆಗೆ ನಿಖರ ಕಾರಣ ತಿಳಿದಿಲ್ಲ. ದುರ್ಷರ್ಮಿಯು‌ ಮನೆಯಲ್ಲಿ ದಿವ್ಯಾ ಒಬ್ಬಳೇ ಇರುವುದರ ಬಗ್ಗೆ ತಿಳಿದುಕೊಂಡು ಕೃತ್ಯ ಎಸಗಿರುವ ಸಾಧ್ಯತೆಯಿದೆ. ಕೊಲೆ ಬಳಿಕೆ ದುಷ್ಕರ್ಮಿಯು ದಿವ್ಯಾ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸಹಿತ ಪರಾರಿಯಾಗಿದ್ದಾನೆ.

ದುರ್ಷರ್ಮಿಯು ಕಳ್ಳತನಕ್ಕೆ ಬಂದು ಕೊಲೆ ಮಾಡಿದನೇ ಅಥವಾ ಬೇರೆ ಏನಾದರೂ ಕಾರಣವಿದೆಯೇ ಎಂಬುದು ತನಿಖೆಯ ಬಳಿಕ ತಿಳಿಯಲಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲಾಗುತ್ತಿದೆ. ದುರ್ಷರ್ಮಿಯ ಪತ್ತೆಗೆ ತೀವ್ರ ಶೋಭ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಂಪತಿಗೆ ಎರಡು ವರ್ಷದ ಮಗು ಇದ್ದು, ಕೃತ್ಯ ನಡೆದಾಗ ಹಾಗೂ ಪತಿ ಬಂದು ನೋಡಿದಾಗಲು ಮಗು ಮಲಗಿತ್ತು ಎನ್ನಲಾಗಿದೆ. ಗುರುಮೂರ್ತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ಪತ್ನಿ ದಿವ್ಯ ಮಗು ನೋಡಿಕೊಂಡು ಮನೆಯಲ್ಲಿಯೇ ಇರುತ್ತಿದ್ದರು‌.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

14 mins ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

23 mins ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

27 mins ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

32 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

36 mins ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

39 mins ago