ರಾಜ್ಯ

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ; ಪ್ರಿಯಾಂಕ್ ಖರ್ಗೆಗೆ ಎಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.

ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ ಉತ್ತರಿಸಿದ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತುಗಳನ್ನಾಡುವುದು ಬಿಟ್ಟು ಮೊದಲು ಕಿಯೋನಿಕ್ಸ್ ವೆಂಡರ್ಸ್ ಗಳ ಬಾಕಿ ಬಿಲ್ ಗಳನ್ನು ಚುಕ್ತಾ ಮಾಡಲಿ ಎಂದರು.

ಸರ್ಕಾರ ಗುತ್ತಿಗೆದಾರರು ಹಾಗೂ ವೆಂಡರ್ಸ್ ಗಳ ಬಿಲ್ ಪಾವತಿಸಲು ಮೀನಮೇಷ ಎಣಿಸುತ್ತಿದೆ. ಸರ್ಕಾರದ ಆಂತರ್ಯ ಏನೆಂಬುದು ಎಲ್ಲರೂ ಬಲ್ಲ ವಿಷಯ. ತಮಗೆ ಬಿಡುಗಡೆ ಆಗಬೇಕಿರುವ ಬಿಲ್ ಗಳನ್ನು ಪಾವತಿಸಿ ಎಂದು ಗುತ್ತಿಗೆದಾರರು ಧೈರ್ಯದಿಂದ ಕೇಳಬೇಕು. ಅವರೇನೂ ಭಿಕ್ಷುಕರಲ್ಲ, ಸಣ್ಣ ಪ್ರಮಾಣದ ಗುತ್ತಿಗೆದಾರರು ತಮ್ಮ ಮನೆ ಹೆಣ್ಣುಮಕ್ಕಳ ಒಡವೆಗಳನ್ನು ಒತ್ತೆ ಇಟ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಾರೆ. ಮಾಡಿರುವ ಸಾಲಗಳನ್ನು ತೀರಿಸಲಾಗದೆ ಬೀದಿಗೆ ಬಂದಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಖರ್ಗೆ ಸಬೂಬು ಹೇಳುವುದು ಬಿಡಬೇಕು
ಎಲ್ಲರ ಮೇಲೆ ಬೇಕಾಬಿಟ್ಟಿ ಮಾತನಾಡುವ ಖರ್ಗೆ ಅವರು ಸಬೂಬು ಹೇಳುವುದು ಬಿಡಬೇಕು. ಈವರೆಗೆ ಗುತ್ತಿಗೆದಾರರ ಎಲ್ ಓಸಿಗಳನ್ನು ಬಿಡುಗಡೆ ಮಾಡುವುದಕ್ಕೆ ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಸಚಿವರು ಹಿಂದಿನ ಸರಕಾರದ ಮೇಲೆ ಗೂಬೆ ಕೂರಿಸುವ ಬದಲು ಗುತ್ತಿಗೆದಾರರ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಯಾವತ್ತೂ ಯಾರಿಗೂ ತೊಂದರೆ ಕೊಡುವ ಕೆಲಸ ಮಾಡಿಲ್ಲ. ಗುತ್ತಿಗೆದಾರರಿಗೆ ಒಂದು ಮನವಿ ಮಾಡುತ್ತೇನೆ. ಮೊದಲು ಒಗ್ಗಟ್ಟಾಗಿ, ನಿಮ್ಮ ನಿಮ್ಮಲ್ಲಿಯೇ ಗುಂಪುಗಳನ್ನು ಮಾಡಿಕೊಂಡರೆ ಅದನ್ನು ಸರಕಾರ ದುರುಪಯೋಗ ಮಾಡಿಕೊಳ್ಳುತ್ತದೆ. ನಿಮ್ಮಲ್ಲಿ ಒಡಕು ಬರಬೇಕು ಎಂದು ಸರಕಾರ ಬಯಸುತ್ತದೆ. ಇದನ್ನು ನೀವು ಅರ್ಥ ಮಾಡಿಕೊಳ್ಳಿ. ಒಂದು ವರ್ಷ ಯಾರು ಕೆಲಸ ಮಾಡಬೇಡಿ. ಅಕ್ಕಪಕ್ಕದ ರಾಜ್ಯಗಳವರನ್ನು ಕರೆದುಕೊಂಡು ಬಂದು ಕೆಲಸ ಮಾಡಿಸಲಿ. ಬರಲಿ, ಯಾರು ಬಂದು ಕೆಲಸ ಮಾಡುತ್ತಾರೋ ನೋಡೋಣ. ಹೇಗೂ ಇವರು ಕೆಲಸವನ್ನು ಕೊಡುತ್ತಿಲ್ಲ. ನೀವು ಕೇಳುತ್ತಿರುವುದು ಹಿಂದಿನ ದುಡ್ಡು ಕೇಳುತ್ತಿದ್ದೀರಿ ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.

ಆತ್ಮಹತ್ಯೆಗೆ ಶರಣಾಗಬೇಡಿ ಎಂದು ಮನವಿ
ಯಾರೇ ಆಗಲಿ ಧೃತಿಗೆಡುವ ಅಗತ್ಯವಿಲ್ಲ. ಸರ್ಕಾರ ನಿಮ್ಮ ಹಣ ನಿಮಗೆ ಕೊಡಲೇಬೇಕು. ಆತ್ಮಹತ್ಯೆಗೆ ಶರಣಾಗಬೇಡಿ. ದಯಾಮರಣಕ್ಕೆ ಯಾಕೆ ಅರ್ಜಿ ಹಾಕಿಕೊಳ್ಳುತ್ತೀರಾ? ನೀವು ತಪ್ಪು ಮಾಡಿಲ್ಲ, ತಪ್ಪು ಮಾಡಿರುವುದು ಸರ್ಕಾರ. ಸರ್ಕಾರದ ವಿರುದ್ಧ ಹೋರಾಟ ಮಾಡುವ ಧೈರ್ಯ ಮಾಡಿ. ನೀವು ಭಿಕ್ಷುಕರಲ್ಲ ಎಂದು ಗುತ್ತಿಗೆದಾರರಿಗೆ ಧೈರ್ಯ ಹೇಳಿದರು ಕೇಂದ್ರ ಸಚಿವರು.

ನಿನಗೆ ಸಿಕ್ಕಿರುವ ಕಾಮಗಾರಿಯನ್ನು ಪ್ರಾಮಾಣಿಕವಾಗಿ ಮಾಡಿ. ದಯಾಮರಣಕ್ಕೆ ಯಾಕೆ ಅರ್ಜಿ ಹಾಕುತ್ತೀರಿ. ಅಂತಹ ಮನಸ್ಥಿತಿಯಿಂದ ಹೊರಬನ್ನಿ. ಕೆಲಸವನ್ನೇ ಮಾಡದೆ ಬಿಲ್ ತೆಗೆದುಕೊಂಡು ಹಣ ಹೊಡೆದ ಎಷ್ಟೋ ಅಧಿಕಾರಿಗಳು, ದೊಡ್ಡ ದೊಡ್ಡ ಗುತ್ತಿಗೆದಾರರು ಇದ್ದಾರೆ. ಸರಿಯಾದ ಕೆಲಸ ಮಾಡಿದ್ದರೆ ನೀವು ಯಾಕೆ ಹೆದರಬೇಕು ಎಂದು ಸಚಿವರು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

1 hour ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

2 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

3 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

3 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

4 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

4 hours ago