ರಾಜ್ಯ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಭೇಟಿಯಾದ ಕಿರಣ್‌ ಮಜುಂದಾರ್‌ ಶಾ

ಬೆಂಗಳೂರು: ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜುಂದಾರ್ ಶಾ ಅವರು ಅವರಿಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಬೆಳಕಿನ ಹಬ್ಬ ದೀಪಾವಳಿ ಶುಭಾಶಯ ಕೋರಿದರು.

ಇಂದು ಕಾವೇರಿ ನಿವಾಸಕ್ಕೆ ಆಗಮಿಸಿದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜುಂದಾರ್ ಶಾ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೀಪಾವಳಿ ಶುಭಾಶಯ ಕೋರಿದರು. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಉಪಸ್ಥಿತರಿದ್ದರು.

ಇದನ್ನು ಓದಿ: ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ: ಸಿಎಂ ಸಿದ್ದರಾಮಯ್ಯ

ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಭೇಟಿ ನೀಡಿದ ಕಿರಣ್‌ ಮಜುಂದಾರ್‌ ಶಾ ಅವರು, ಹಬ್ಬದ ಶುಭಾಶಯ ತಿಳಿಸಿ ಕೆಲಹೊತ್ತು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಇಂದು ನನ್ನ ನಿವಾಸದಲ್ಲಿ ಕಿರಣ್‌ ಮಜುಂದಾರ್‌ ಅವರನ್ನು ಭೇಟಿಯಾಗಲು ಸಂತೋಷವಾಯಿತು. ಬೆಂಗಳೂರಿನ ಬೆಳವಣಿಗೆ, ನಾವೀನ್ಯತೆ ಮತ್ತು ಕರ್ನಾಟಕದ ಬೆಳವಣಿಗೆ, ಮುಂದಿನ ಹಾದಿಯ ಕುರಿತು ನಾವು ಆಕರ್ಷಕ ಚರ್ಚೆ ನಡೆಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

10 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

10 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

10 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

11 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

11 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

12 hours ago