ಬೆಂಗಳೂರು: ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜುಂದಾರ್ ಶಾ ಅವರು ಅವರಿಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೆಳಕಿನ ಹಬ್ಬ ದೀಪಾವಳಿ ಶುಭಾಶಯ ಕೋರಿದರು.
ಇಂದು ಕಾವೇರಿ ನಿವಾಸಕ್ಕೆ ಆಗಮಿಸಿದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜುಂದಾರ್ ಶಾ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೀಪಾವಳಿ ಶುಭಾಶಯ ಕೋರಿದರು. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಉಪಸ್ಥಿತರಿದ್ದರು.
ಇದನ್ನು ಓದಿ: ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ: ಸಿಎಂ ಸಿದ್ದರಾಮಯ್ಯ
ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕಿರಣ್ ಮಜುಂದಾರ್ ಶಾ ಅವರು, ಹಬ್ಬದ ಶುಭಾಶಯ ತಿಳಿಸಿ ಕೆಲಹೊತ್ತು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಇಂದು ನನ್ನ ನಿವಾಸದಲ್ಲಿ ಕಿರಣ್ ಮಜುಂದಾರ್ ಅವರನ್ನು ಭೇಟಿಯಾಗಲು ಸಂತೋಷವಾಯಿತು. ಬೆಂಗಳೂರಿನ ಬೆಳವಣಿಗೆ, ನಾವೀನ್ಯತೆ ಮತ್ತು ಕರ್ನಾಟಕದ ಬೆಳವಣಿಗೆ, ಮುಂದಿನ ಹಾದಿಯ ಕುರಿತು ನಾವು ಆಕರ್ಷಕ ಚರ್ಚೆ ನಡೆಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…