ಬೆಂಗಳೂರು: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಮಾರ್ಚ್.1ರಿಂದ 8 ರವರೆಗೆ ನಡೆಯಲಿದೆ. ಈ ಬಾರಿಯ ಚಿತ್ರೋತ್ಸವವು ʼಸರ್ವ ಜನಾಂಗದ ಶಾಂತಿʼಯ ತೋಟ ಎಂಬ ಧ್ಯೇಯವಾಕ್ಯದೊಂದಿಗೆ ನಡೆಯಲಿದೆ.
ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ಸುಮಾರು 8 ದಿನಗಳ ಕಾಲ 60 ದೇಶಗಳ 200ಕ್ಕೂ ಹೆಚ್ಚು ಚಿತ್ರಗಳು ಪ್ರದರ್ಶನ ಕಾಣಲಿವೆ.
ಮಾರ್ಚ್.1ರಂದು ಸಿಎಂ ಸಿದ್ದರಾಮಯ್ಯ ಚಿತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಮಾರೋಪ ಸಮಾರಂಭವು ಮಾರ್ಚ್ 8ರಂದು ನಡೆಯಲಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಭಾಗವಹಿಸಲಿದ್ದಾರೆ.