ರಾಜ್ಯ

ಮೊದಲು ರಾಜ್ಯ, ದೇಶ ಎಂಬ ನಿಷ್ಠೆಯಿಂದ ದುಡಿಯಿರಿ: ಕೆ.ಜೆ ಜಾರ್ಜ್‌

ಬೆಂಗಳೂರು: ಜನರ ತೆರಿಗೆ ಹಣದಿಂದ ಸಂಬಳ ಪಡೆಯುವ ನಾವು, ರಾಜ್ಯ-ದೇಶ ಮೊದಲು ಎಂಬ ನಿಷ್ಠೆ ಇಟ್ಟುಕೊಂಡು ದುಡಿಯಬೇಕು ಎಂದು ಇಲಾಖೆಗೆ ಹೊಸದಾಗಿ ನೇಮಕಗೊಂಡಿರುವ ಇಂಜಿನಿಯರ್‌ಗಳಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್‌ ಕಿವಿಮಾತು ಹೇಳಿದರು.

ಕೆಇಬಿ ಇಂಜಿನಿಯರ್ಸ್‌ ಅಸೋಸಿಯೇಷನ್‌ನ ಸಭಾಂಗಣದಲ್ಲಿಂದು (ಜುಲೈ.4) ಇಂಧನ ಇಲಾಖೆಗೆ ಹೊಸದಾಗಿ ನೇಮಕಗೊಂಡಿರುವ 400 ಸಹಾಯಕ ಇಂಜಿನಿಯರ್‌ಗಳ 3 ದಿನಗಳ ಕಾರ್ಯಾನುಭವ ತರಬೇತಿ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, “ಇಂಧನ ಇಲಾಖೆಯ ಸಿಬ್ಬಂದಿ ನಿತ್ಯ ಜನರೊಂದಿಗೆ ವ್ಯವಹರಿಸಬೇಕಾಗುತ್ತದೆ. ಗ್ರಾಹಕರಿಗೆ ಯಾವುದೇ ಕುಂದು ಕೊರತೆಯಾಗದಂತೆ ಉತ್ತಮ ಸೇವೆ ಒದಗಿಸಬೇಕು. ಜನರ ತೆರಿಗೆ ಹಣದಲ್ಲಿ ನಾನು ಸೇರಿದಂತೆ ಸರ್ಕಾರದ ಇಲಾಖೆಯಲ್ಲಿ ಕೆಲಸ ಮಾಡುವ ಎಲ್ಲರೂ ಸಂಬಳ ಪಡೆಯುತ್ತೇವೆ. ಹಾಗಾಗಿ ರಾಜ್ಯ, ದೇಶದ ಹಿತದೃಷ್ಠಿಗೆ ಧಕ್ಕೆಯಾಗದಂತೆ ನಿಷ್ಠೆಯಿಂದ ಕೆಲಸ ಮಾಡಬೇಕು,”ಎಂದು ಸಲಹೆ ನೀಡಿದರು.

“ನೇಮಕಾತಿ ವಿಳಂಬವಾಗಿದ್ದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಹಲವಾರು ಬಾರಿ ಮನವಿ ಸಲ್ಲಿಸಿದ್ದರು. ಇಲಾಖೆಯ ಹಿರಿಯ ಅಧಿಕಾರಳ ನಿರಂತರ ಪ್ರಯತ್ನದಿಂದ 6 ತಿಂಗಳೊಳಗೆ ನೇಮಕ ಆದೇಶ ನೀಡಲಾಗಿದೆ. ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಒಳಗೆ ಆದೇಶ ಪತ್ರ ನೀಡಲಾಗಿದೆ. ಈಗ ನಿಷ್ಠೆಯಿಂದ ಕೆಲಸ ಮಾಡುವ ಜವಾಬ್ದಾರಿ ಅವರ ಮೇಲಿದೆ. ವಿದ್ಯುತ್‌ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಖರ್ಚು ಕಡಿಮೆ ಮಾಡುವ ನಿಟ್ಟಿನಲ್ಲಿ ಅವರು ತಮ್ಮ ಜ್ಞಾನ ಬಳಸಬೇಕಿದೆ,” ಎಂದು ಅವರು ಹೇಳಿದರು.

“ಕಳೆದ ವಾರವಷ್ಟೇ ರಾಷ್ಟ್ರೀಯ ವಿದ್ಯುತ್‌ ಸುರಕ್ಷತಾ ಸಪ್ತಾಹ ಆಚರಿಸಿದ್ದೇವೆ. ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಪರಿಹಾರ ಕೊಡಬಹುದು. ಆದರೆ, ಅಂಥ ಪರಿಸ್ಥಿತಿಯೇ ಬಾರದಿರಲಿ ಎಂದು ಪ್ರಾರ್ಥಿಸುತ್ತೇನೆ. ಇಲಾಖೆಯ ಇಂಜಿನಿಯರ್‌ಗಳ ಪ್ರಾಣ ನಮಗೆ ಅತ್ಯಮೂಲ್ಯ. ವಿದ್ಯುತ್ ಪೂರೈಕೆ, ನಿರ್ವಹಣೆ ವೇಳೆ ಅತ್ಯಂತ ಜಾಗರೂಕರಾಗಿರಬೇಕು. ಅದಕ್ಕಾಗಿ ತರಬೇತಿ ಕೊಡಲಾಗುತ್ತದೆ. ಎಲ್ಲರೂ ಸುರಕ್ಷತೆ ಬಗ್ಗೆ ಲಕ್ಷ್ಯ ಕೊಡಿ,”ಎಂದು ಸಚಿವರು ಮನವಿ ಮಾಡಿದರು.

“ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿರುವ ದೇಶ ನಮ್ಮದು. ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ,”ಎಂದು ಜಾರ್ಜ್‌ ಹೇಳಿದರು.

ಕಾರ್ಯಕ್ರಮದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯಕಾರ್ಯರ್ಶಿ ಗೌರವ್‌ ಗುಪ್ತಾ, ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ, ಕೆಇಬಿ ಇಂಜಿನಿಯರ್ಸ್ ಅಸೋಸಿಷಯನ್‌ನ ಬಸವರಾಜು, ಸುಧಾರಕರ್‌ ರೆಡ್ಡಿ, ಶಿವಣ್ಣ ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

24 mins ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

32 mins ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

38 mins ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

44 mins ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

10 hours ago