ರಾಜ್ಯ

ರಾಜ್ಯದಲ್ಲಿ ನಂದಿನಿ ಹಾಲಿನ ದರ 2 ರೂ ಏರಿಕೆ

ಬೆಂಗಳೂರು : ಪೆಟ್ರೋಲ್‌ ಮತ್ತು ಡಿಸೇಲ್‌ ಬೆಲೆ ಏರಿಕೆ ಮಾಡಿದ ಬೆನ್ನಲ್ಲೆ ಇದೀಗ ನಂದಿನಿ ಹಾಲಿನ ದರವನ್ನು ಸಹ ಸರ್ಕಾರ ಹೆಚ್ಚಳ ಮಾಡಿದೆ.

ಬೇರೆ ರಾಜ್ಯಗಳ ಹಾಲಿನ ದರ ಹೋಲಿಕೆ ಮಾಡಿ ಒಂದು ಲೀಟರ್‌ ಗೆ ೨ ರೂಪಾಯಿಗಳನ್ನ ಹೆಚ್ಚಳ ಮಾಡಿ ಕರ್ನಾಟಕ ಹಾಲು ಮಹಾಮಂಡಳಿ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ.

ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದ್ದು, ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್​​ಗೆ 50 ಎಂಎಲ್​​ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ತಿಳಿಸಿದರು.

ಕೆಎಂಎಫ್​ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 mins ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

2 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

3 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

4 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

4 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

10 hours ago