ಬೆಂಗಳೂರು : ಕರ್ನಾಟಕ ಸರ್ಕಾರಿ ಸಹಭಾಗಿತ್ವದ ಹೆಮ್ಮೆಯ ಉದ್ಯಮಗಳಲ್ಲಿ ಒಂದಾಗಿರುವ ಕರ್ನಾಟಕ ಹಾಲು ಒಕ್ಕೂಟದಿಂದ ದಸರಾ ಹಬ್ಬದಲ್ಲಿ 400 ಮೆಟ್ರಿಕ್ ಟನ್‌ಗೂ ಅಧಿಕ ಸಿಹಿ ಪದಾರ್ಥಗಳನ್ನು ಮಾರಾಟ ಮಾಡಲಾಗಿದೆ.
ರಾಜ್ಯದ ಹೆಮ್ಮೆಯ ಉದ್ಯಮವಾದ ಕೆಎಂಎಫ್‌ನಿಂದ ದಸರಾ ಹಬ್ಬದಲ್ಲಿ ದಾಖಲೆ ಮಟ್ಟದಲ್ಲಿ ಸಿಹಿ ಪದಾರ್ಥಗಳನ್ನು ಮಾರಾಟ ಮಾಡಲಾಗಿದೆ. ಈ ಮೂಲಕ ಕೆಎಂಎಫ್ ಸಿಹಿ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ದಸರಾ ಹಬ್ಬದ ಸಮಯದಲ್ಲಿ ಹಾಲು ಒಕ್ಕೂಟದ ಇತಿಹಾಸದಲ್ಲಿಯೇ ಅತಿ ಹೆಚ್ಚು ಸಿಹಿ ಮಾರಾಟ ಮಾಡಲಾಗಿದೆ. ಅತಿ ಹೆಚ್ಚು ಸಿಹಿ ತಿನಿಸು ಮಾರಾಟ ಮಾಡಿ ನೂತನ ದಾಖಲೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ದುಪ್ಪಟ್ಟು ಅಂದರೆ 400 ಮೆಟ್ರಿಕ್ ಟನ್ ಸಿಹಿ ಮಾರಾಟ ಮಾಡಲಾಗಿದೆ.
ಕೆಎಂಎಪ್‌ನ ಮೈಸೂರು ಪಾಕ್, ಧಾರವಾಡ ಪೇಡ ಸೇರಿದಂತೆ, ಗುಲಾಬ್ ಜಾಮೂನ್, ರಸಗುಲ್ಲಾ, ಹಲ್ವಾ, ಬಿಸ್ಕತ್ಸ್ ಸೇರಿದಂತೆ ನಾನಾ ಬಗೆಯ ಸಿಹಿ ತಿನಿಸುಗಳ ಮಾರಾಟದಲ್ಲಿ ಭಾರಿ ಹೆಚ್ಚಳವಾಗಿದೆ. ಪ್ರತಿವರ್ಷ 180ರಿಂದ 200 ಮೆಟ್ರಿಕ್ ಟನ್ ಸಿಹಿ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಈ ಬಾರಿ 400 ಮೆಟ್ರಿಕ್ ಟನ್ ಸಿಹಿ ಮಾರಾಟ ಮಾಡುವ ಮೂಲಕ ಕೆಎಂಎಫ್ ಹೊಸ ಮೈಲಿಗಲ್ಲಿನ ಇತಿಹಾಸ ಸೃಷ್ಟಿಸಿದೆ. ಇದರ ಬೆನ್ನಲ್ಲೆ ಬೇಸಿಗೆಗೆ ಹೊಸ ಉತ್ಪನ್ನಗಳನ್ನು ದಾಸ್ತಾನು ಮಾಡಲು ಚಿಂತನೆ ಮಾಡಿದೆ. ಜೊತೆಗೆ, ಹಾಲಿನ ಉತ್ಪಾದನೆ ಪ್ರಮಾಣದಲ್ಲೂ ಏರಿಕೆಯಾಗಿದ್ದು ಗ್ರಾಹಕರಿಗೆ ಉತ್ತಮ ಸಿಹಿ ತಿನಿಸುಗಳನ್ನು ಮಾರಾಟ ಮಾಡಲು ಕೆಎಂಎಫ್ ಸೂಕ್ತ ಸಿದ್ಧತೆಯನ್ನು ಮಾಡಿಕೊಂಡಿದೆ.
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಇಂದಿನಿಂದ ( ಡಿಸೆಂಬರ್ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…