ರಾಜ್ಯ

ಕೆಎಂಎಫ್‌ನಿಂದ ದಸರಾ ಹಬ್ಬದಲ್ಲಿ 400 ಮೆಟ್ರಿಕ್‌ ಟನ್‌ ಸ್ವೀಟ್ಸ್‌ ಮಾರಾಟ

ಬೆಂಗಳೂರು : ಕರ್ನಾಟಕ ಸರ್ಕಾರಿ ಸಹಭಾಗಿತ್ವದ ಹೆಮ್ಮೆಯ ಉದ್ಯಮಗಳಲ್ಲಿ ಒಂದಾಗಿರುವ ಕರ್ನಾಟಕ ಹಾಲು ಒಕ್ಕೂಟದಿಂದ ದಸರಾ ಹಬ್ಬದಲ್ಲಿ 400 ಮೆಟ್ರಿಕ್‌ ಟನ್‌ಗೂ ಅಧಿಕ ಸಿಹಿ ಪದಾರ್ಥಗಳನ್ನು ಮಾರಾಟ ಮಾಡಲಾಗಿದೆ.

ರಾಜ್ಯದ ಹೆಮ್ಮೆಯ ಉದ್ಯಮವಾದ ಕೆಎಂಎಫ್‌ನಿಂದ ದಸರಾ ಹಬ್ಬದಲ್ಲಿ ದಾಖಲೆ ಮಟ್ಟದಲ್ಲಿ ಸಿಹಿ ಪದಾರ್ಥಗಳನ್ನು ಮಾರಾಟ ಮಾಡಲಾಗಿದೆ. ಈ ಮೂಲಕ ಕೆಎಂಎಫ್ ಸಿಹಿ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ದಸರಾ ಹಬ್ಬದ ಸಮಯದಲ್ಲಿ ಹಾಲು ಒಕ್ಕೂಟದ ಇತಿಹಾಸದಲ್ಲಿಯೇ ಅತಿ ಹೆಚ್ಚು ಸಿಹಿ ಮಾರಾಟ ಮಾಡಲಾಗಿದೆ. ಅತಿ ಹೆಚ್ಚು ಸಿಹಿ ತಿನಿಸು ಮಾರಾಟ ಮಾಡಿ ನೂತನ‌ ದಾಖಲೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ದುಪ್ಪಟ್ಟು ಅಂದರೆ 400 ಮೆಟ್ರಿಕ್ ಟನ್ ಸಿಹಿ ಮಾರಾಟ ಮಾಡಲಾಗಿದೆ.

ಕೆಎಂಎಪ್‌ನ ಮೈಸೂರು ಪಾಕ್, ಧಾರವಾಡ ಪೇಡ ಸೇರಿದಂತೆ, ಗುಲಾಬ್‌ ಜಾಮೂನ್‌, ರಸಗುಲ್ಲಾ, ಹಲ್ವಾ, ಬಿಸ್ಕತ್ಸ್‌ ಸೇರಿದಂತೆ ನಾನಾ ಬಗೆಯ ಸಿಹಿ ತಿನಿಸುಗಳ ಮಾರಾಟದಲ್ಲಿ ಭಾರಿ ಹೆಚ್ಚಳವಾಗಿದೆ. ಪ್ರತಿವರ್ಷ 180ರಿಂದ 200 ಮೆಟ್ರಿಕ್ ಟನ್ ಸಿಹಿ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಈ ಬಾರಿ 400 ಮೆಟ್ರಿಕ್ ಟನ್ ಸಿಹಿ ಮಾರಾಟ ಮಾಡುವ ಮೂಲಕ ಕೆಎಂಎಫ್‌ ಹೊಸ ಮೈಲಿಗಲ್ಲಿನ ಇತಿಹಾಸ ಸೃಷ್ಟಿಸಿದೆ. ಇದರ ಬೆನ್ನಲ್ಲೆ ಬೇಸಿಗೆಗೆ ಹೊಸ ಉತ್ಪನ್ನಗಳನ್ನು ದಾಸ್ತಾನು ಮಾಡಲು ಚಿಂತನೆ ಮಾಡಿದೆ. ಜೊತೆಗೆ, ಹಾಲಿನ ಉತ್ಪಾದನೆ ಪ್ರಮಾಣದಲ್ಲೂ ಏರಿಕೆಯಾಗಿದ್ದು ಗ್ರಾಹಕರಿಗೆ ಉತ್ತಮ ಸಿಹಿ ತಿನಿಸುಗಳನ್ನು ಮಾರಾಟ ಮಾಡಲು ಕೆಎಂಎಫ್ ಸೂಕ್ತ ಸಿದ್ಧತೆಯನ್ನು ಮಾಡಿಕೊಂಡಿದೆ.

 

lokesh

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

3 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

3 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

3 hours ago