ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ.
ಈ ಬಾರಿ ಅನುಕೂಲಕರವಾದ ಮುಂಗಾರು ಮಳೆ ಹಾಗೂ ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್‌ಗೆ ಸಾಧ್ಯವಾಗಿದೆ. ಈ ಮೂಲಕ ಹಾಲು ಉತ್ಪಾದಿಸುವ ಪ್ರಮುಖ ರಾಜ್ಯವಾಗಿ ಕರ್ನಾಟಕ ತನ್ನ ಛಾಪು ಮೂಡಿಸಿದೆ.
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದು, ಹಸಿರು ಮೇವು ಚಿಗುರೊಡೆದಿದೆ. ಹೆಚ್ಚಿನ ಪ್ರಮಾಣದಲ್ಲಿ ಮೇವಿನ ಲಭ್ಯತೆ, ಜಾನುವಾರುಗಳಲ್ಲಿ ಪೌಷ್ಟಿಕತೆ, ಆರೋಗ್ಯ ಸುಧಾರಣೆಯಿಂದ ಹಾಲಿನ ಉತ್ಪಾದನೆ ಹೆಚ್ಚಳವಾಗಿದೆ.
ಇದನ್ನೂ ಓದಿ:- ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ: ಸಚಿವ ಜಿ.ಪರಮೇಶ್ವರ್
ಇನ್ನು ಮಾಹಿತಿ ಪ್ರಕಾರ ಮುಂದಿನ ದಿನಗಳಲ್ಲೂ ಕೆಎಂಎಫ್ ಸಾರ್ವಕಾಲಿಕ ದಾಖಲೆ ಮಾಡಲಿದೆ ಎನ್ನಲಾಗುತ್ತಿದ್ದು, ಕೆಎಂಎಫ್ ಉದ್ಯವೂ ಮತ್ತಷ್ಟು ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.





