ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆ ನೀಡುತ್ತಿದ್ದಾರೆ.
ಈಗಾಗಲೇ ಹೈಕಮಾಂಡ್ ಸಿಎಂ ಸಿದ್ದರಾಮಯ್ಯರಿಗೆ ರಾಜಣ್ಣ ರಾಜೀನಾಮೆ ಪಡೆಯಲು ಸೂಚಿಸಿದೆ ಎಂದು ಹೇಳಿದೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಣ್ಣ ಅವರು, ನಾನು ಸಿಎಂ ಭೇಟಿಗೆ ಹೋಗುತ್ತಿದ್ದೇನೆ. ಸಿಎಂ ಭೇಟಿ ಬಳಿಕ ಮಾತನಾಡುತ್ತೇನೆ. ನನಗೆ ಈವರೆಗೂ ಯಾವುದೇ ಸೂಚನೆ ಬಂದಿಲ್ಲ ಎಂದು ಹೇಳಿದ್ದಾರೆ.
ಇನ್ನು ರಾಜಣ್ಣ ರಾಜೀನಾಮೆ ನೀಡದಿದ್ದರೆ ಸಚಿವ ಸಂಪುಟದಿಂದಲೇ ಅವರನ್ನು ಉಚ್ಛಾಟನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.





