Mysore
18
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಸಿಎಂ ಸಿದ್ದರಾಮಯ್ಯಗೆ ಕಾಣಿಸಿಕೊಂಡ ಮಂಡಿ ನೋವು: ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು

ಬೆಂಗಳೂರು: ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು.

ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ನಿಗದಿಯಂತೆ ಇಂದು ಗೌರಿಬಿದನೂರು ಮತ್ತು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಆಯೋಜನೆ ಮಾಡಿದ್ದ ಕಾರ್ಯಕ್ರಮಕ್ಕೆ ಬರುವುದಾಗಿ ಪ್ರವಾಸವನ್ನು ನಿಗದಿ ಮಾಡಲಾಗಿತ್ತು. ಆದರೆ, ಇಂದು ಆಸ್ಪತ್ರೆಗೆ ತಪಾಸಣೆಗೆ ಹೋಗಬೇಕಾಗಿದ್ದ ಹಿನ್ನೆಲೆಯಲ್ಲಿ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.

 

Tags:
error: Content is protected !!