Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಪುಸ್ತಕ ಓದುವ ಮೂಲಕ ಗಳಿಸುವ ಜ್ಞಾನಾರ್ಜನೆ ಹೆಚ್ಚು ಪರಿಣಾಮಕಾರಿ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ನುಡಿದರು.

ವೀರಲೋಕ ಪ್ರಕಾಶನ ಆಯೋಜಿಸಿದ್ದ ಪುಸ್ತಕ ಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುಸ್ತಕ ಮತ್ತು ಪತ್ರಿಕೆಗಳನ್ನು ಕೊಂಡು ಓದುವ ಅಭಿರುಚಿ ಮತ್ತು ಕಾಳಜಿಯನ್ನು ಬೆಳೆಸಿಕೊಳ್ಳಿ ಎಂದು ನೆರೆದಿದ್ದ ಓದುಗರಿಗೆ ಕರೆ ನೀಡಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ರಾಮಲಿಂಗಾರೆಡ್ಡಿ, ಲೇಖಕರಾದ ಬರಗೂರು ರಾಮಚಂದ್ರಪ್ಪ, ಮಾಜಿ ಸಂಸದ ಉಗ್ರಪ್ಪ ಮತ್ತು ಸಂಪಾದಕರಾದ ವಿಶ್ವೇಶ್ವರ ಭಟ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ