Mysore
22
few clouds

Social Media

ಶುಕ್ರವಾರ, 09 ಜನವರಿ 2026
Light
Dark

ಕೋಗಿಲು ಬಡಾವಣೆ ಅಕ್ರಮ ಮನೆ ತೆರವು: 26 ಜನರಿಗೆ ಮನೆ ಕೊಡಲು ಅವಕಾಶ ಎಂದ ಸಚಿವ ಜಮೀರ್‌ ಅಹಮ್ಮದ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು, ತೆರವಾಗಿರುವ ಮನೆಗಳ ಪೈಕಿ 26 ಜನರಿಗೆ ಮಾತ್ರ ಮನೆ ಕೊಡಲು ಅವಕಾಶವಿದೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಅಕ್ರಮ ಮನೆ ತೆರವಾಗಿರುವವರ ಪೈಕಿ 26 ಜನರಿಗೆ ಮನೆ ಕೊಡಲು ಅವಕಾಶವಿದೆ. ಪರಿಶೀಲನೆ ವೇಳೆ 26 ನಿವಾಸಿಗಳ ದಾಖಲೆಗಳು ಮಾತ್ರ ಸರಿಯಾಗಿದೆ. ಇನ್ನೂ ಹಲವರ ಕಾರ್ಯ ನಡೆಯುತ್ತಿದೆ ಎಂದರು.

ಒಟ್ಟು 161 ಮನೆಗಳನ್ನು ತೆರವು ಮಾಡಲಾಗಿದೆ. ಕಂಡಿಷನ್‌ ಹಾಕಿ ಸಂತ್ರಸ್ತರಿಗೆ ಮನೆಗಳನ್ನು ನೀಡಲಾಗುತ್ತದೆ. ಹೊರಗಿನವರಿಗೆ ಯಾವುದೇ ಕಾರಣಕ್ಕೂ ಮನೆ ನೀಡಲ್ಲ. 26 ಜನರ ದಾಖಲೆಗಳು ಸೂಕ್ತವಾಗಿದ್ದು, ಅವರಿಗೆ ಮನೆ ಹಂಚಿಕೆ ಮಾಡುತ್ತೇವೆ. ಸಿಎಂ ಈಗಾಗಲೇ ಸಭೆ ಮಾಡಿ ಮನೆ ನೀಡಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

Tags:
error: Content is protected !!