ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಾಶ್ರಿತರ ಮಾಹಿತಿ ಜಿಬಿಎ ಕೈಸೇರಿದ್ದು ಒಟ್ಟು 188 ಮನೆಗಳನ್ನು ಗುರುತಿಸಲಾಗಿದೆ.
ಕಂದಾಯ ಇಲಾಖೆ ಹಾಗೂ ಉತ್ತರ ನಗರ ಪಾಲಿಕೆಯಿಂದ ಜಿಬಿಎಗೆ ವರದಿ ಸಲ್ಲಿಕೆ ಮಾಡಲಾಗಿದ್ದು, 167ಮನೆಗಳ ತೆರವಿನಲ್ಲಿ 188 ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
188 ಕುಟುಂಬಗಳ ಒಟ್ಟು 1007 ಜನ ಸದಸ್ಯರು ಸದ್ಯದ ಅಧಿಕೃತ ನಿರಾಶ್ರಿತರಾಗಿದ್ದಾರೆ. 188 ಕುಟುಂಬದ ಮುಖ್ಯಸ್ಥರು 475 ಜನ ವಯಸ್ಕರು, 34 ಮಕ್ಕಳು ಮುಸ್ಲಿಂ ಕುಟುಂಬಗಳು 156, ಹಿಂದೂ31 ಹಾಗೂ ಕ್ರಿಶ್ಚಿಯನ್ 1 ಕುಟುಂಬ ನಿರಾಶ್ರಿತರಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮತ್ತೊಮ್ಮೆ ಪರಿಶೀಲನೆ ನಡೆಸಿದ ಬಳಿಕ ಜಿಬಿಎ ಸರ್ಕಾರಕ್ಕೆ ಈ ವರದಿಯನ್ನು ಸಲ್ಲಿಸಲಿದೆ ಎನ್ನಲಾಗಿದೆ. ಯಲಹಂಕ ಬಳಿಯ ಫಕೀರ ಲೇಔಟ್, ಹೊಸ ಫಕಿರ್ ಲೇಔಟ್, ವಾಸಿಂ ಲೇಔಟ್‌ನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದನ್ನು ಸರ್ಕಾರ ತೆರವುಗೊಳಿಸಿತ್ತು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…