ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದು ಪ್ರಸಿದ್ಧಿ ಪಡೆದಿರುವ ಗವಿಸಿದ್ದೇಶ್ವರ ಮಹಾ ರಥೋತ್ಸವ ನಾಳೆಯಿಂದ ಆರಂಭವಾಗಲಿದೆ.
ಮಹಾರಥೋತ್ಸವಕ್ಕೆ ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಅವರು ಚಾಲನೆ ನೀಡಲಿದ್ದಾರೆ.
ಸತತ 15 ದಿನಗಳ ಕಾಲ ಮಹಾದಾಸೋಹ ನಡೆಯುವುದು ಜಾತ್ರೆಯ ವಿಶೇಷ. ಈ ವರ್ಷದ ಜಾತ್ರೆಯಲ್ಲಿ ಭಕ್ತರು ಬೆಲ್ಲದ ಜಿಲೇಬಿ, ಮಿರ್ಚಿ, ರವೆ ಉಂಡೆ, ಶೇಂಗಾ ಹೋಳಿಗೆ ಸೇರಿದಂತೆ ಇನ್ನಿತರ ಸಿಹಿ ತಿನಿಸುಗಳನ್ನು ಸವಿಯಲಿದ್ದಾರೆ.
ಜಾತ್ರೆಯ ಹಿನ್ನೆಲೆಯಲ್ಲಿ ಇಡೀ ಕೊಪ್ಪಳ ನಗರಿ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದ್ದು, ದೀಪಾಲಂಕಾರ ನೋಡುಗರ ಕಣ್ಮನ ಸೆಳೆಯುತ್ತಿದೆ.





