ಕೊಪ್ಪಳ: ಜಿಲ್ಲೆಯ ಕುಷ್ಟಗಿಯ ವ್ಯಕ್ತಿಯೊಬ್ಬ ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಯುವತಿಯಿಂದ ಬಲವಂತವಾಗಿ ಡೆತ್‌ನೋಟ್ ಬರೆಸಿಕೊಂಡ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಅವಿವಾಹಿತ ಯುವತಿಯನ್ನ ಬೆದರಿಸಿ, ಡೆತ್ ನೋಟ್ ಬರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದೆ ಆರೋಪದ ಮೇರೆಗೆ, ಅಂಗಡಿ ಮಾಲೀಕ ವೀರೇಶ ನಾಯಕನನ್ನು(೪೭) ಬುಧುವಾರ(ಮೇ.೨೨) ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ವೀರೇಶ ನಾಯಕ ಕೊಪ್ಪಳದಲ್ಲಿ ಎಲೆಕ್ಟ್ರಿಕಲ್ ಅಂಗಡಿಯೊಂದರ ಮಾಲೀಕನಾಗಿದ್ದಾನೆ. ಈತ ಅಂಗಡಿಯಲ್ಲಿ ೨೨ ವರ್ಷದ ಯುವತಿಯನ್ನು ಕೆಲಸಕ್ಕೆ ಇರಿಸಿಕೊಂಡಿದ್ದ. ಯುವತಿಯೊಂದಿಗೆ ಕಳೆದ ಎರಡು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ. ಯುವತಿ ಮದುವೆಯಾಗುವಂತೆ ಒತ್ತಾಯಿಸಿದರೂ ಒಪ್ಪದ ಆರೋಪಿ, ಅಕ್ರಮ ಸಂಬಂಧ ಮುಂದುವರಿಸುವಂತೆ ಬೆದರಿಸಿದ್ದ. ಆರೋಪಿ ವೀರೇಶ ನಾಯಕನಿಗೆ ವಿವಾಹವಾಗಿ ಮೂವರು ಮಕ್ಕಳಿದ್ದವು.
ಅಕ್ರಮ ಸಂಬಂಧ ಮುಂದುವರೆಸಲು ಯುವತಿ ನಿರಾಕರಿಸಿದ್ದರೆ ಕೋಪಗೊಂಡ ಆರೋಪಿ, ತಮ್ಮ ಅಂಗಡಿಯಲ್ಲಿ ಕೆಲಸ ಮಾಡುವಾಗ ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಯುವತಿಯಿಂದ ಬಲವಂತವಾಗಿ ಡೆತ್‌ನೋಟ್ ಬರೆಸಿಕೊಂಡಿದ್ದಾರೆ. ಅಲ್ಲದೇ ಈ ಡೆತ್‌ನೋಟ್ ವಿಷಯವಾಗಿ ವಿಡಿಯೋ ಹೇಳಿಕೆಯನ್ನು ಸಹ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆರೋಪಿ ವೀರೇಶ ನಾಯಕನಿಂದ ಮನನೊಂದ ಯುವತಿ ಅಂಗಡಿಯ ಕೆಲಸ ಬಿಟ್ಟಿದ್ದರು. ಯುವತಿಯ ಕುಟುಂಬ ಬೇರೆ ಕಡೆ ವರನನ್ನು ಹುಡುಕಿ ಮದುವೆ ಮಾಡಲು ಮುಂದಾಗಿದ್ದರು. ಇದರಿಂದ ಸಿಟ್ಟಾದ ಆರೋಪಿ, ಯುವತಿಯ ಮನೆಯ ಮುಂದೆ ಹೋಗಿ ಗಲಾಟೆ ನಡೆಸಿದ್ದಾನೆ. ಇದರಿಂದ ಬೇಸತ್ತ ಯುವತಿ ಸ್ಥಳೀಯ ಪೊಲೀಸ್ ಠಾಣೆಗೆ ಮೇ ೨೧ ರಂದು ದೂರು ನೀಡಿದ್ದಾರೆ. ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರೋಪಿ ವೀರೇಶ ನಾಯಕನನ್ನು ಬಂಧಿಸಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…