ರಾಜ್ಯ

ಕೊಪ್ಪಳ: ಡೆತ್‌ನೋಟ್‌ ಬರೆಸಿಕೊಂಡು ಲೈಂಗಿಕ ದೌರ್ಜನ್ಯ

ಕೊಪ್ಪಳ: ಜಿಲ್ಲೆಯ ಕುಷ್ಟಗಿಯ ವ್ಯಕ್ತಿಯೊಬ್ಬ ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಯುವತಿಯಿಂದ ಬಲವಂತವಾಗಿ ಡೆತ್‌ನೋಟ್‌ ಬರೆಸಿಕೊಂಡ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಅವಿವಾಹಿತ ಯುವತಿಯನ್ನ ಬೆದರಿಸಿ, ಡೆತ್‌ ನೋಟ್‌ ಬರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದೆ ಆರೋಪದ ಮೇರೆಗೆ, ಅಂಗಡಿ ಮಾಲೀಕ ವೀರೇಶ ನಾಯಕನನ್ನು(೪೭) ಬುಧುವಾರ(ಮೇ.೨೨) ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ವೀರೇಶ ನಾಯಕ ಕೊಪ್ಪಳದಲ್ಲಿ ಎಲೆಕ್ಟ್ರಿಕಲ್‌ ಅಂಗಡಿಯೊಂದರ ಮಾಲೀಕನಾಗಿದ್ದಾನೆ. ಈತ ಅಂಗಡಿಯಲ್ಲಿ ೨೨ ವರ್ಷದ ಯುವತಿಯನ್ನು ಕೆಲಸಕ್ಕೆ ಇರಿಸಿಕೊಂಡಿದ್ದ. ಯುವತಿಯೊಂದಿಗೆ ಕಳೆದ ಎರಡು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ. ಯುವತಿ ಮದುವೆಯಾಗುವಂತೆ ಒತ್ತಾಯಿಸಿದರೂ ಒಪ್ಪದ ಆರೋಪಿ, ಅಕ್ರಮ ಸಂಬಂಧ ಮುಂದುವರಿಸುವಂತೆ ಬೆದರಿಸಿದ್ದ. ಆರೋಪಿ ವೀರೇಶ ನಾಯಕನಿಗೆ ವಿವಾಹವಾಗಿ ಮೂವರು ಮಕ್ಕಳಿದ್ದವು.

ಅಕ್ರಮ ಸಂಬಂಧ ಮುಂದುವರೆಸಲು ಯುವತಿ ನಿರಾಕರಿಸಿದ್ದರೆ ಕೋಪಗೊಂಡ ಆರೋಪಿ, ತಮ್ಮ ಅಂಗಡಿಯಲ್ಲಿ ಕೆಲಸ ಮಾಡುವಾಗ ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಯುವತಿಯಿಂದ ಬಲವಂತವಾಗಿ ಡೆತ್‌ನೋಟ್‌ ಬರೆಸಿಕೊಂಡಿದ್ದಾರೆ. ಅಲ್ಲದೇ ಈ ಡೆತ್‌ನೋಟ್‌ ವಿಷಯವಾಗಿ ವಿಡಿಯೋ ಹೇಳಿಕೆಯನ್ನು ಸಹ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರೋಪಿ ವೀರೇಶ ನಾಯಕನಿಂದ ಮನನೊಂದ ಯುವತಿ ಅಂಗಡಿಯ ಕೆಲಸ ಬಿಟ್ಟಿದ್ದರು. ಯುವತಿಯ ಕುಟುಂಬ ಬೇರೆ ಕಡೆ ವರನನ್ನು ಹುಡುಕಿ ಮದುವೆ ಮಾಡಲು ಮುಂದಾಗಿದ್ದರು. ಇದರಿಂದ ಸಿಟ್ಟಾದ ಆರೋಪಿ, ಯುವತಿಯ ಮನೆಯ ಮುಂದೆ ಹೋಗಿ ಗಲಾಟೆ ನಡೆಸಿದ್ದಾನೆ. ಇದರಿಂದ ಬೇಸತ್ತ ಯುವತಿ ಸ್ಥಳೀಯ ಪೊಲೀಸ್‌ ಠಾಣೆಗೆ ಮೇ ೨೧ ರಂದು ದೂರು ನೀಡಿದ್ದಾರೆ. ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರೋಪಿ ವೀರೇಶ ನಾಯಕನನ್ನು ಬಂಧಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

3 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

4 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

4 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

5 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

5 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

9 hours ago