ರಾಜ್ಯ

ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಆಯ್ಕೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಳಿಕ ರಾಜ್ಯ ಬಿಜೆಪಿ ಪಕ್ಷದಲ್ಲಿ ಹಲವು ಬದಲಾವಣೆಗಳು ಕಂಡುಬಂದವು. ಲಿಂಗಾಯಿತರ ಓಲೈಕೆಗಾಗಿ ಬಿಎಸ್‌ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಿದರು. ನಂತರ ವಿಧಾನ ಸಭಾ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆರ್‌ ಆಶೋಕ್‌ ನೇಮಕ ಕೂಡಾ ನಡೆದಿತ್ತು. ನೆನ್ನೆ ಪದಾಧಿಕಾರಿಗಳ ನೇಮಕ ನಡೆದರೇ ಇಂದು ಮತ್ತೊಂದು ಬದಲಾವಣೆಯನ್ನು ಬಿಜೆಪಿ ಮಾಡಿದೆ.

ಹೈ ಕಮಾಂಡ್‌ ನಿರ್ದೇಶನ ಮೇರೆ ಇದೀಗ ವಿಧಾನ ಪರಿಷತ್ ಗೆ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚನೆಯಂತೆ ಈ ಆಯ್ಕೆ ನಡೆದಿದ್ದು, ಜೊತೆಗೆ ಬಿಜೆಪಿಗೆ ಹಲವು ನಾಯಕರಿಗೆ ವಿವಿಧ ಸ್ಥಾನಗಳನ್ನು ನೀಡಲಾಗಿದೆ. ಕೋಟಾ ಅವರು ೨೦೦೯ ರಲ್ಲಿ ಮೊಲದ ಬಾರಿಗೆ ಕರ್ನಾಟಕ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು.

ಇನ್ನುಳಿದಂತೆ ಸುನೀಲ್ ವಲ್ಯಾಪುರೆ ಅವರನ್ನು ಪರಿಷತ್ ಉಪನಾಯಕನನ್ನಾಗಿ ನೇಮಿಸಲಾಗಿದೆ. ಅರವಿಂದ ಬೆಲ್ಲದ್ ಕೆಳಮನೆಯ ಉಪನಾಯಕ, ರವಿಕುಮಾರ್ ಪರಿಷತ್ ಸಚೇತಕ, ದೊಡ್ಡನಗೌಡ ಜಿ ಪಾಟೀಲ್ ಕೆಳಮನೆಯ ಸಚೇತಕನನ್ನಾಗಿ ಬಿಜೆಪಿ ಆಯ್ಕೆ ಮಾಡಲಾಗಿದೆ.

 

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago