ಮಂಗಳೂರು: ಇಲ್ಲಿನ ಉಳ್ಳಾಲ ಸಮೀಪದ ಕೋಟೆಕಾರು ಬ್ಯಾಂಕ್‌ನಲ್ಲಿ ನಡೆದಿದ್ದ ದರೋಡೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ತಮಿಳುನಾಡಿನ ಮಧುರೈ ಬಳಿ ಬಂಧಿಸಲಾಗಿದೆ.
ಆರೋಪಿಗಳು ಮಹಾರಾಷ್ಟ್ರದ ಕಾರು ಬಳಸಿ ಎರಡು ಚೀಲದಲ್ಲಿ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದರು. ಮುಂಬೈನ ಧಾರಾವಿ ಗ್ಯಾಂಗ್‌ನಿಂದ ಈ ಕೃತ್ಯ ನಡೆದಿದ್ದು, ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಈ ದರೋಡೆ ಪ್ರಕರಣದಲ್ಲಿ ಸ್ಥಳೀಯರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಆರೋಪಿಗಳಿಂದ ಎರಡು ಗೋಣಿಚೀಲ, ತಲ್ವಾರ್, ಎರಡು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.