ರಾಜ್ಯ

ಕೋಟೆಕಾರು ಬ್ಯಾಂಕ್‌ನಲ್ಲಿ ದರೋಡೆ ಪ್ರಕರಣ: ಮೂವರು ದರೋಡೆಕಾರರ ಬಂಧನ

ಮಂಗಳೂರು: ಇಲ್ಲಿನ ಉಳ್ಳಾಲ ಸಮೀಪದ ಕೋಟೆಕಾರು ಬ್ಯಾಂಕ್‌ನಲ್ಲಿ ನಡೆದಿದ್ದ ದರೋಡೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ಅವರು, ಬ್ಯಾಂಕ್‌ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ತಮಿಳುನಾಡಿನ ಮಧುರೈ ಬಳಿ ಬಂಧಿಸಲಾಗಿದೆ.

ಆರೋಪಿಗಳು ಮಹಾರಾಷ್ಟ್ರದ ಕಾರು ಬಳಸಿ ಎರಡು ಚೀಲದಲ್ಲಿ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದರು. ಮುಂಬೈನ ಧಾರಾವಿ ಗ್ಯಾಂಗ್‌ನಿಂದ ಈ ಕೃತ್ಯ ನಡೆದಿದ್ದು, ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ಈ ದರೋಡೆ ಪ್ರಕರಣದಲ್ಲಿ ಸ್ಥಳೀಯರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಆರೋಪಿಗಳಿಂದ ಎರಡು ಗೋಣಿಚೀಲ, ತಲ್ವಾರ್‌, ಎರಡು ಪಿಸ್ತೂಲ್‌ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

9 mins ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

15 mins ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

20 mins ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

25 mins ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

29 mins ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

2 hours ago