ಮಂಗಳೂರು: ಇಲ್ಲಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪೊಲೀಸರು ಮುಂಬೈ ಮೂಲದ ಆರೋಪಿಯೋರ್ವನಿಗೆ ಗುಂಡೇಟು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆರೋಪಿ ಕಣ್ಣನ್ ಮಣಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಆರೋಪಿಗಳನ್ನು ತಮಿಳುನಾಡಿನಿಂದ ಮಂಗಳೂರಿಗೆ ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಆರೋಪಿ ಕಣ್ಣನ್ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಎನ್ನಲಾಗಿದೆ.
ಈ ವೇಳೆ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯ ಅಲಂಕಾರು ಗುಡ್ಡದಲ್ಲಿ ಶೂಟೌಟ್ ನಡೆದಿದೆ. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ ಮೇಲೆ ಶೂಟೌಟ್ ಮಾಡಲಾಗಿದೆ.