ಬೆಂಗಳೂರು: 4 ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಆಕಾಂಕ್ಷಿಗಳೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ಪಕ್ಷದ ಪದಾಧಿಕಾರಿಗಳು, ಆಯಾ ಕ್ಷೇತ್ರದ ವ್ಯಾಪ್ತಿಗೆ ಬರುವ ಶಾಸಕರು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರು ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕೆಪಿಸಿಸಿ ಪದಾಧಿಕಾರಿಗಳಿಗೆ ಪರಿಷತ್ ಚುನಾವಣೆ ಹೊಣೆ ಹೊರಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ:-ಅಣ್ಣನನ್ನು ಮುಖ್ಯಮಂತ್ರಿಯಾಗಿಸಬೇಕೆಂಬ ಆಸೆ ನನಗಿದೆ: ಮಾಜಿ ಸಂಸದ ಡಿ.ಕೆ.ಸುರೇಶ್




